ಏಷ್ಯನ್ ಗೇಮ್ಸ್ 2023: ಶೂಟಿಂಗ್'ನಲ್ಲಿ ಬೆಳ್ಳಿ, ಚಿನ್ನದ ಪದಕ ಗೆದ್ದ ಭಾರತದ ತಂಡ ಶ್ಲಾಘಿಸಿದ ಪ್ರಧಾನಿ ಮೋದಿ
ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ವನಿತೆಯರ ತಂಡವನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಏಷ್ಯನ್ ಗೇಮ್ಸ್ ನಲ್ಲಿ ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ದಿವ್ಯಾ ತಾಡಿಗೋಳ್, ಇಶಾ ಸಿಂಗ್ ಮತ್ತು ಪಾಲಕ್ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಕೋರುತ್ತಿದ್ದೇನೆ. ಅವರ ಯಶಸ್ಸು ಮುಂಬರುವ ಹಲವಾರು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಭಾರತದ ತಂಡವನ್ನು ಶ್ಲಾಘಿಸಿದ್ದಾರೆ.
ಇದು ಅದ್ಭುತ ಗೆಲುವು, ಪ್ರತಿಷ್ಠಿತ ಮತ್ತು ವಿಶ್ವ ದಾಖಲೆಯಾಗಿದೆ. ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ 50 ಮೀಟರ್ ರೈಫಲ್ 3Ps ಟೀಮ್ ಈವೆಂಟ್‌ನಲ್ಲಿ ಗೆಲುವು ಸಾಧಿಸಿದ ಸ್ವಪ್ನಿಲ್ ಕುಸಾಲೆ, ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಮತ್ತು ಅಖಿಲ್ ಶೆರಾನ್ ಅವರಿಗೆ ಅಭಿನಂದನೆಗಳು. ಅತ್ಯುತ್ತಮ ಪ್ರದರ್ಶನದ ಮೂಲಕ ಭಾರತದ ತಂಡ ಅಸಾಧಾರಣ ಸಂಕಲ್ಪ ಮತ್ತು ಟೀಮ್‌ವರ್ಕ್ ತೋರಿಸಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ