ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ

ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆ
ಮಹಿಳಾ ಮೀಸಲಾತಿ ಮಸೂದೆ

ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.

ಕಾನೂನು ಸಚಿವಾಲಯ ಪ್ರಕಟಿಸುವ ಅಧಿಸೂಚನೆಯಲ್ಲಿ ಗುರುವಾರ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ ಹಾಗೂ ಅದೇ ಕ್ಷಣದಿಂದ ಸಂವಿಧಾನದ (106ನೇ ತಿದ್ದುಪಡಿ) ಕಾಯ್ದೆಯಾಗಿರುವುದು ಅಧಿಕೃತವಾಗಿದೆ. ನಿಬಂಧನೆಗಳ ಪ್ರಕಾರ ಕೇಂದ್ರ ಸರ್ಕಾರ ಅಧಿಕೃತ ಗೆಜೆಟ್ ನೋಟಿಫಿಕೇಶನ್ ಪ್ರಕಟಿಸಿದ ದಿನದಿಂದ ಕಾಯ್ದೆ ಜಾರಿಯಾಗಲಿದೆ.

ನಾರಿ ಶಕ್ತಿ ವಂದನ್ ಅಧಿನಿಯಮ್ ಮಹಿಳೆಯರಿಗೆ ಲೋಕಸಭೆಯಲ್ಲಿ ಹಾಗೂ ವಿಧಾನಸಭೆಗಳಲ್ಲಿ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸುತ್ತದೆ ಈ ಮಸೂದೆಯನ್ನು ಉಭಯ ಸದನಗಳಲ್ಲಿಯೂ ಅಂಗೀಕರಿಸಲಾಗಿದ್ದು ಹೊಸ ಸಂಸತ್ ಭವನದಲ್ಲಿ ಅಂಗೀಕರಿಸಲಾದ ಮೊದಲ ಮಸೂದೆ ಎಂಬ ಹೆಗ್ಗಳಿಕೆ ಹೊಂದಿದೆ.

ಸೆಪ್ಟೆಂಬರ್ 20 ರಂದು, ಮಸೂದೆಯನ್ನು ಅಂಗೀಕರಿಸಲಾಗಿತ್ತು, 454 ಸದಸ್ಯರು ಶಾಸನದ ಪರವಾಗಿ ಮತ ಚಲಾಯಿಸಿದರು ಮತ್ತು ವಿರುದ್ಧ ಇಬ್ಬರು ಮತ ಚಲಾಯಿಸಿದ್ದರು. ವಿರೋಧ ಪಕ್ಷದ ಸದಸ್ಯರು ಮಂಡಿಸಿದ ತಿದ್ದುಪಡಿಗಳು ಋಣಾತ್ಮಕವಾಗಿದ್ದು, ಕರಡು ಶಾಸನದ ಪ್ರತ್ಯೇಕ ಷರತ್ತುಗಳ ಮೇಲೆ ಮತ ಚಲಾಯಿಸಲಾಯಿತು. ಸೆ.21 ರಂದು ರಾಜ್ಯಸಭೆಯಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com