ಮಹಾರಾಷ್ಟ್ರ: ಸಂಜಯ್ ರಾವತ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ
ಕಳೆದ ವರ್ಷ ಗುಂಡೇಟಿಗೆ ಬಲಿಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರಂತೆ ನಿಮ್ಮನ್ನು ಹತ್ಯೆ ಮಾಡುವುದಾಗಿ ಶಿವಸೇನಾ(ಯುಬಿಟಿ) ಸಂಸದ ಸಂಜಯ್ ರಾವತ್ ಅವರಿಗೆ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ಪುಣೆಯ...
Published: 01st April 2023 03:56 PM | Last Updated: 01st April 2023 05:55 PM | A+A A-

ಸಂಜಯ್ ರಾವತ್
ಮುಂಬೈ: ಕಳೆದ ವರ್ಷ ಗುಂಡೇಟಿಗೆ ಬಲಿಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರಂತೆ ನಿಮ್ಮನ್ನು ಹತ್ಯೆ ಮಾಡುವುದಾಗಿ ಶಿವಸೇನಾ(ಯುಬಿಟಿ) ಸಂಸದ ಸಂಜಯ್ ರಾವತ್ ಅವರಿಗೆ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ಪುಣೆಯ ಯುವಕನೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಮದ್ಯದ ಅಮಲಿನಲ್ಲಿ ಆತ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಇದನ್ನು ಓದಿ: ಎಲ್ಲ ಸರಿಯಾಗಿದೆ, ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ: ಸೋನಿಯಾ, ರಾಹುಲ್ ಭೇಟಿ ಬಳಿಕ ರಾವತ್
ಆದರೂ ವಿಸ್ತೃತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ರಾವತ್ ಅವರು ಇಲ್ಲಿನ ಕಂಜುರ್ಮಾರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಮುಂಬೈ ಮತ್ತು ಪುಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶುಕ್ರವಾರ ರಾತ್ರಿ 20 ವರ್ಷದ ವ್ಯಕ್ತಿಯನ್ನು ಖರಾಡಿ ಪ್ರದೇಶದಲಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.