ಸುರೇಶ್ ರೈನಾ ಸಂಬಂಧಿಕರನ್ನು ಕೊಂದಿದ್ದ ಕುಖ್ಯಾತ ರೌಡಿ ರಶೀದ್ ಎನ್‌ಕೌಂಟರ್‌ನಲ್ಲಿ ಹತ್ಯೆ

2020ರಲ್ಲಿ ಕ್ರಿಕೆಟಿಗ ಸುರೇಶ್ ರೈನಾ ಅವರ ಮೂವರು ಸಂಬಂಧಿಕರನ್ನು ಹತ್ಯೆ ಮಾಡಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಇಂದು ಸಂಜೆ ಮುಜಾಫರ್‌ನಗರದ ಶಾಹಪುರ್ ಪ್ರದೇಶದಲ್ಲಿ ಎನ್‌ಕೌಂಟರ್‌ನಲ್ಲಿ ಯುಪಿ ಪೊಲೀಸರು ಹೊಡೆದುರುಳಿಸಿದ್ದಾರೆ. 
ಸುರೇಶ್ ರೈನಾ
ಸುರೇಶ್ ರೈನಾ
Updated on

ಮುಜಾಫರ್‌ನಗರ: 2020ರಲ್ಲಿ ಕ್ರಿಕೆಟಿಗ ಸುರೇಶ್ ರೈನಾ ಅವರ ಮೂವರು ಸಂಬಂಧಿಕರನ್ನು ಹತ್ಯೆ ಮಾಡಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಇಂದು ಸಂಜೆ ಮುಜಾಫರ್‌ನಗರದ ಶಾಹಪುರ್ ಪ್ರದೇಶದಲ್ಲಿ ಎನ್‌ಕೌಂಟರ್‌ನಲ್ಲಿ ಯುಪಿ ಪೊಲೀಸರು ಹೊಡೆದುರುಳಿಸಿದ್ದಾರೆ. 

ತ್ರಿವಳಿ ಕೊಲೆ ಸೇರಿದಂತೆ ಹತ್ತಾರು ಡಕಾಯಿತಿ ಮತ್ತು ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿ ರಶೀದ್ ಅಲಿಯಾಸ್ ಚಲ್ತಾ ಫಿರ್ತಾ ಅಲಿಯಾಸ್ ಸಿಪಾಹಿಯಾ ತಲೆಗೆ 50,000 ರೂಪಾಯಿಗಳ ಬಹುಮಾನ ಘೋಷಿಸಲಾಗಿತ್ತು. ಎನ್‌ಕೌಂಟರ್‌ನಲ್ಲಿ ರಶೀದ್ ನನ್ನು ಹತ್ಯೆ ಮಾಡಲಾಗಿದೆ ಎಂದು ಎಸ್‌ಎಸ್‌ಪಿ ಸಂಜೀವ್ ಸುಮನ್ ತಿಳಿಸಿದರು. 

ಶಹಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂತಾರಾಜ್ಯ ಗ್ಯಾಂಗ್‌ನ ಸದಸ್ಯರು ತಲೆಮರೆಸಿಕೊಂಡಿರುವ ರಹಸ್ಯ ಮಾಹಿತಿಯ ನಂತರ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದು ರಶೀದ್ ಹತ್ಯೆಯಾಗಿದ್ದು ಆತನ ಸಹಾಯಕ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಎನ್ ಕೌಂಟರ್ ಸ್ಥಳದಿಂದ ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯ ಸಂದರ್ಭದಲ್ಲಿ, ಶಾಹಪುರದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಬಬ್ಲು ಸಿಂಗ್ ಅವರಿಗೂ ಬುಲೆಟ್ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಶೀದ್‌ನ ಸಹಾಯಕನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

2020ರ ಪಠಾಣ್‌ಕೋಟ್‌ನ ತರಿಯಾಲ್ ಗ್ರಾಮದಲ್ಲಿ ಆಗಸ್ಟ್ 19 ಮತ್ತು 20ರ ಮಧ್ಯರಾತ್ರಿ ತ್ರಿವಳಿ ಕೊಲೆ ನಡೆದಿತ್ತು. ರೈನಾ ಅವರ ಚಿಕ್ಕಪ್ಪ, ಗುತ್ತಿಗೆದಾರ ಅಶೋಕ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಕುಮಾರ್ ಅವರ ಮಗ ಕೌಶಲ್ ಆಗಸ್ಟ್ 31 ರಂದು ಸಾವನ್ನಪ್ಪಿದರು. ಕುಮಾರ್ ಅವರ ಪತ್ನಿ ಆಶಾರಾಣಿ ಹಾಗೂ ಇಬ್ಬರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಬಂಧಿತರಾದವರಲ್ಲಿ ರಾಜಸ್ಥಾನದ ಜುಂಜುನು ಜಿಲ್ಲೆಯ ಮೂವರು ಗ್ಯಾಂಗ್ ಸದಸ್ಯರು ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com