ರಾಮನವಮಿಯಂದು ಕತ್ತಿ ಮತ್ತು ದೊಣ್ಣೆಗಳ ಸಾಂಪ್ರದಾಯಿಕ ಪ್ರದರ್ಶನ ವೇಳೆ 700ಕ್ಕೂ ಹೆಚ್ಚು ಮಂದಿಗೆ ಗಾಯ!
ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯಲ್ಲಿ ರಾಮ ನವಮಿ ಆಚರಣೆಯ ಸಂದರ್ಭದಲ್ಲಿ ಕತ್ತಿ ಮತ್ತು ದೊಣ್ಣೆಗಳ ಪ್ರದರ್ಶನದ ವೇಳೆ ಸುಮಾರು 700 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
Published: 02nd April 2023 12:47 AM | Last Updated: 02nd April 2023 12:47 AM | A+A A-

ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯಲ್ಲಿ ರಾಮ ನವಮಿ ಆಚರಣೆಯ ಸಂದರ್ಭದಲ್ಲಿ ಕತ್ತಿ ಮತ್ತು ದೊಣ್ಣೆಗಳ ಪ್ರದರ್ಶನದ ವೇಳೆ ಸುಮಾರು 700 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಆರಂಭವಾದ ರಾಮನವಮಿ ಉತ್ಸವ ಶನಿವಾರ ಸಂಜೆ ಮುಕ್ತಾಯವಾಯಿತು. ಧಾರಾಕಾರ ಮಳೆಯ ನಡುವೆ ಬೋಡುಮ್ ಬಜಾರ್‌ನಲ್ಲಿ ಶತಮಾನಗಳಷ್ಟು ಹಳೆಯದಾದ ಉತ್ಸವದಲ್ಲಿ 2 ಲಕ್ಷಕ್ಕೂ ಜನರು ಭಾಗವಹಿಸಿದ್ದರು ಎಂದು ಅವರು ಹೇಳಿದರು.
ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಹಜಾರಿಬಾಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಎಚ್‌ಎಂಸಿಎಚ್) 15 ವೈದ್ಯಕೀಯ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಮುಂಬೈನಲ್ಲಿ ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ; 21 ಮಂದಿ ಬಂಧನ, 300 ಮಂದಿ ವಿರುದ್ಧ ಪ್ರಕರಣ ದಾಖಲು
ಸಾಂಪ್ರದಾಯಿಕ ಆಯುಧಗಳೊಂದಿಗೆ ಪ್ರದರ್ಶನ ನಡೆಯುತ್ತಿದ್ದಾಗ ಸುಮಾರು 700 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಚಿನವರಿಗೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಲವರನ್ನು ವಿವಿಧ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಎಚ್‌ಎಂಸಿಎಚ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.