ಪಶ್ಚಿಮ ಬಂಗಾಳ: ಹೂಗ್ಲಿಯಲ್ಲಿ ಬಿಜೆಪಿ ಶೋಭಾ ಯಾತ್ರೆ ವೇಳೆ ಕಲ್ಲು ತೂರಾಟ, ಹಿಂಸಾಚಾರ- ವಿಡಿಯೋ

ಪಶ್ಚಿಮ ಬಂಗಾಳದ ಹೂಗ್ಲಿಯ ರಿಸ್ರಾದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಬಿಜೆಪಿಯ ರಾಮನವಮಿ ಶೋಭಾ ಯಾತ್ರೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಹಿಂಸಾಚಾರ ಭುಗಿಲೆದ್ದಿದೆ.
ಶೋಭಾಯಾತ್ರೆ ವೇಳೆ ಹಿಂಸಾಚಾರ
ಶೋಭಾಯಾತ್ರೆ ವೇಳೆ ಹಿಂಸಾಚಾರ

ಹೂಗ್ಲಿ:  ಪಶ್ಚಿಮ ಬಂಗಾಳದ ಹೂಗ್ಲಿಯ ರಿಸ್ರಾದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಬಿಜೆಪಿಯ ರಾಮನವಮಿ ಶೋಭಾ ಯಾತ್ರೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಹಿಂಸಾಚಾರ ಭುಗಿಲೆದ್ದಿದೆ.

ಬಿಜೆಪಿ ವಿಶ್ವ ಹಿಂದೂ ಪರಿಷತ್ ಮತ್ತು  ಇತರ ಹಿಂದೂ ಸಂಘಟನೆಗಳಿಂದ ಆಯೋಜಿಸಲಾಗಿದ್ದ ಶೋಭಾ ಯಾತ್ರೆಯಲ್ಲಿ  ಬಿಜೆಪಿ ಉಪಾಧ್ಯಕ್ಷ ದಿಲೀಪ್ ಘೋಷ್ ಮತ್ತಿತರರು  ಶೋಭಯಾತ್ರೆಯಲ್ಲಿ ಪಾಲ್ಗೊಂಡಿದ್ದರು. 

ನಗರದ ಪ್ರಮುಖ ರಸ್ತೆಗಳಲ್ಲಿ ಶೋಭಾ ಯಾತ್ರೆ ಸಾಗುತ್ತಿರುವಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿರುವುದಾಗಿ ವರದಿಯಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ, ಚಂದನನಗರ ಪೊಲೀಸ್ ಆಯುಕ್ತ ಅಮಿತ್ ಜಬಲ್ಗೀರ್ ಹೆಚ್ಚುವರಿ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.

ದಾಳಿಯಲ್ಲಿ ಶಾಸಕ ಬಿಮನ್ ಘೋಷ್ ಗಾಯಗೊಂಡಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ. ಶೋಭಾ ಯಾತ್ರೆ ವೇಳೆ ಮಹಿಳೆಯರು ಮತ್ತು ಮಕ್ಕಳ ಮೇಲೆ ಕಲ್ಲು ತೂರಾಟ ನಡೆದಿದೆ. ಹೌರಾ ಹಿಂಸಾಚಾರದ ನಂತರವೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಲ್ಲು ತೂರಾಟ ನಡೆಸಿ ವಾಹನಗಳನ್ನು ಧ್ವಂಸಗೊಳಿಸಲಾಗುತ್ತಿದೆ ಎಂದು  ದಿಲೀಪ್ ಘೋಷ್ ಆರೋಪಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com