ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೃತ್ಯದ ಬಳಿಕ ದುಪ್ಪಟಾದಿಂದ ಮರಕ್ಕೆ ನೇಣು ಬಿಗಿಯಲು ಯತ್ನ
ಪಾಟ್ನಾದ ಹಳ್ಳಿಯೊಂದರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಇಲ್ಲಿ ತಿಳಿಸಿದ್ದಾರೆ.
Published: 04th April 2023 04:25 PM | Last Updated: 04th April 2023 07:26 PM | A+A A-

ಸಾಂದರ್ಭಿಕ ಚಿತ್ರ
ಪಾಟ್ನಾ: ಇಲ್ಲಿನ ಹಳ್ಳಿಯೊಂದರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಇಲ್ಲಿ ತಿಳಿಸಿದ್ದಾರೆ.
ಅಪರಾಧ ಎಸಗಿದ ಬಳಿಕ ಆರೋಪಿಗಳು ಬಾಲಕಿಯನ್ನು ದುಪಟ್ಟಾದಿಂದ ಮರಕ್ಕೆ ನೇಣು ಹಾಕಲು ಯತ್ನಿಸಿದ್ದು, ಆಕೆಯ ಕಿರುಚಾಟ ಕೇಳಿ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ತಡೆದಿದ್ದಾರೆ. ನಂತರ ಆಕೆಯನ್ನು ಬದೈಯಾ ಬ್ಲಾಕ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಅಪಾಯದಿಂದ ಪಾರಾಗಿದ್ದಾಳೆ ಎಂದು ಹೇಳಲಾಗಿದೆ.
ಆರೋಪಿಗಳಲ್ಲಿ ಒಬ್ಬಾತ ಸಂತ್ರಸ್ತೆಗೆ ಸ್ನೇಹಿತನಾಗಿದ್ದನು. ಆತ ಬಾಲಕಿಯ ಮನೆಯಿಂದ ಆಕೆಯನ್ನು ಗ್ರಾಮದ ಹತ್ತಿರದ ತೋಟಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಈಗಾಗಲೇ ಅವನ ಮೂವರು ಸ್ನೇಹಿತರು ಇದ್ದರು. ಬಳಿಕ, ಬಾಲಕಿಯ ಮೇಲೆ ಎಲ್ಲರೂ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮಧ್ಯರಾತ್ರಿ 12.30ರ ಸುಮಾರಿಗೆ ಘಟನೆ ಬಗ್ಗೆ ನಮಗೆ ತಿಳಿಯಿತು. ನಮ್ಮ ತಂಡ ಕೂಡಲೇ ಆಸ್ಪತ್ರೆಗೆ ಧಾವಿಸಿದೆ. ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ನಾವು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪಚಮಹಲ ಪೊಲೀಸ್ ಠಾಣೆಯ ಎಎಸ್‌ಐ ಮತ್ತು ತನಿಖಾಧಿಕಾರಿ ಶಾರದಾ ನನದ್ ರೈ ಹೇಳಿದ್ದಾರೆ.
ನಾಲ್ವರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದು, ಆಕೆಯ ಸ್ಥಿತಿ ಸ್ಥಿರವಾಗಿರುವುದರಿಂದ ವೈದ್ಯಕೀಯ ಪರೀಕ್ಷೆಗಾಗಿ ಬಾರ್ಹ್‌ನಲ್ಲಿರುವ ಉಪವಿಭಾಗೀಯ ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ರೈ ತಿಳಿಸಿದ್ದಾರೆ.
ಇದನ್ನೂ ಓದಿ: ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ 6 ಯುವಕರಿಂದ ಸಾಮೂಹಿಕ ಅತ್ಯಾಚಾರ
ಆರೋಪಿಗಳಲ್ಲಿ ಒಬ್ಬ ಪರಾರಿಯಾಗಿದ್ದಾನೆ. ಆತನನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದರು.