
ಸಾಂದರ್ಭಿಕ ಚಿತ್ರ
ಅಂಬಾಲಾ(ಹರಿಯಾಣ): 16 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಪತಿ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಮ್ಮೆ ತನ್ನ ಪತಿ ಅಪ್ರಾಪ್ತ ಬಾಲಕಿಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತಡೆದಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ತನ್ನ ಮಗಳೊಂದಿಗೆ ತನ್ನ ಸ್ವಗ್ರಾಮದಿಂದ ಅಂಬಾಲಾಕ್ಕೆ ಹಿಂದಿರುಗಿದಾಗ, ಆರೋಪಿಯು ಮತ್ತೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ಕುಟುಂಬ ಮೂಲತಃ ಬಿಹಾರದವರಾಗಿದ್ದು ಕಳೆದ ಹಲವು ವರ್ಷಗಳಿಂದ ಈ ಕುಟುಂಬ ಅಂಬಾಲಾ ನಗರದಲ್ಲಿ ನೆಲೆಸಿದೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿ ತಂದೆ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸರ ಕ್ರಮದ ಬಗ್ಗೆ ಮಾಹಿತಿ ಪಡೆದ ಆರೋಪಿ ಪರಾರಿಯಾಗಿದ್ದನು ಎಂದು ಮಹಿಳಾ ಠಾಣೆ (ಅಂಬಾಲ) ಎಸ್‌ಎಚ್‌ಒ ಸುರೇಂದ್ರ ಕೌರ್ ಹೇಳಿದ್ದಾರೆ. ಆದರೆ, ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.