ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.
ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ
ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ
Updated on

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.

ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ವಿ ಮುರಳೀಧರನ್ ಅವರ ಸಮ್ಮುಖದಲ್ಲಿ ಅನಿಲ್ ಆಂಟನಿ ಅವರು ಕೇಸರಿ ಪಕ್ಷಕ್ಕೆ ಸೇರಿದರು.

ಕೇರಳದ ಕಾಂಗ್ರೆಸ್ ನಾಯಕರಾಗಿದ್ದ ಅನಿಲ್ ಆಂಟನಿ ಅವರು 2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ವಿವಾದದ ನಂತರ ಜನವರಿಯಲ್ಲಿ ಕಾಂಗ್ರೆಸ್  ತೊರೆದಿದ್ದರು.

ಬಿಜೆಪಿ ಸೇರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅನಿಲ್ ಆಂಟನಿ, ಜಗತ್ತಿನಲ್ಲಿ ಭಾರತವನ್ನು ಪ್ರಮುಖ ಸ್ಥಾನದಲ್ಲಿ ಇರಿಸುವ ಸ್ಪಷ್ಟ ದೃಷ್ಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೊಂದಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com