ದರೋಡೆ ಮಾಡಲೆಂದು ಬಂದ ಅಪ್ರಾಪ್ತನಿಂದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ದರೋಡೆ ಮಾಡುವ ಉದ್ದೇಶದಿಂದ ನಿರ್ಮಾಣ ಹಂತದ ಕಟ್ಟಡದ ಆವರಣಕ್ಕೆ ಪ್ರವೇಶಿಸಿದ ಅಪ್ರಾಪ್ತ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Published: 06th April 2023 01:05 PM | Last Updated: 06th April 2023 01:05 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದರೋಡೆ ಮಾಡುವ ಉದ್ದೇಶದಿಂದ ನಿರ್ಮಾಣ ಹಂತದ ಕಟ್ಟಡದ ಆವರಣಕ್ಕೆ ಪ್ರವೇಶಿಸಿದ ಅಪ್ರಾಪ್ತ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ವಾಯವ್ಯ ದೆಹಲಿಯ ಅಶೋಕ್ ವಿಹಾರ್ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಕೃತ್ಯ ನಡೆದಾಗ ಕಟ್ಟಡದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಬಾಲಕಿಯ ಪೋಷಕರು ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.
ಆಕೆಯ ಪೋಷಕರು ನಿರ್ಮಾಣ ಹಂತದ ಕಟ್ಟಡದೊಳಗೆ ತಾತ್ಕಾಲಿಕ ಮನೆಯಲ್ಲಿ ವಾಸಿಸುತ್ತಿದ್ದರು ಮತ್ತು ಅವರು ತಮ್ಮ ವೇತನವನ್ನು ಸಂಗ್ರಹಿಸಲು ಹೋಗಿದ್ದರು. ಈ ವೇಳೆ, ಅಪ್ರಾಪ್ತ ಅವರ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡುವ ಉದ್ದೇಶದಿಂದ ಅಲ್ಲಿಗೆ ಬಂದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದರೆ, ಆತ ಅಲ್ಲಿಗೆ ಬಂದಾಗ ಅಪ್ರಾಪ್ತ ಬಾಲಕಿ ಮತ್ತು ಆಕೆಯ 18 ವರ್ಷದ ಸಹೋದರಿ ಇಬ್ಬರೇ ಇರುವುದನ್ನು ಕಂಡಿದ್ದಾನೆ. ಈ ಸಂದರ್ಭದ ಲಾಭ ಪಡೆದ ಆತ, ಇಬ್ಬರಿಗೂ ಚಾಕು ತೋರಿಸಿ ಹೆದರಿಸಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ಕಟ್ಟಡದ ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೃತ್ಯದ ಬಳಿಕ ದುಪ್ಪಟಾದಿಂದ ಮರಕ್ಕೆ ನೇಣು ಬಿಗಿಯಲು ಯತ್ನ
ಸಂತ್ರಸ್ತೆಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ನಂತರ ಆರೋಪಿ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಕಟ್ಟಡ ಶಾಲೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.