ವಿಪಕ್ಷಗಳಿಂದ ತೀವ್ರ ಗದ್ದಲ: ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ಲೋಕಸಭೆ ಕಲಾಪವನ್ನು  ಅನಿರ್ದಿಷ್ಠಾವಧಿಗೆ ಮುಂದೂಡಲಾಯಿತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ಲೋಕಸಭೆ ಕಲಾಪವನ್ನು  ಅನಿರ್ದಿಷ್ಠಾವಧಿಗೆ ಮುಂದೂಡಲಾಯಿತು.

ಅದಾನಿ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅವಮಾನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕ್ಷಮಿಸಬೇಕೆಂದು ಆಗ್ರಹಿಸಿದರು. ಇದರಿಂದಾಗಿ ಬಜೆಟ್ ಅಧಿವೇಶನದ ಕೊನೆಯದಿನವಾದ ಇಂದು ಕಲಾಪಕ್ಕೆ ತೀವ್ರ ಅಡ್ಡಿಯುಂಟಾಯಿತು. ಇದರಿಂದಾಗಿ ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಇನ್ನು ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. ಪ್ರತಿಪಕ್ಷಗಳ ಘೋಷಣೆಗಳ ನಡುವೆಯೇ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಈ ಮಧ್ಯೆ, ಪಕ್ಷದ 44ನೇ ಸಂಸ್ಥಾಪನಾ ದಿನ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com