ಕೇರಳ: ರೈಲಿಗೆ ಬೆಂಕಿ ಇಟ್ಟ ಪ್ರಕರಣ: ಆರೋಪಿ ಶಾರುಖ್ ಸೈಫಿಗೆ 14 ದಿನಗಳ ನ್ಯಾಯಾಂಗ ಬಂಧನ

ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರುಖ್‌ ಸೈಫಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ ಶಾರುಖ್ ರಫಿ
ಆರೋಪಿ ಶಾರುಖ್ ರಫಿ

ತಿರುವನಂತಪುರ: ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರುಖ್‌ ಸೈಫಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಶಾರುಖ್ ಎಂದು ಗುರುತಿಸಲಾದ ಶಂಕಿತ ವ್ಯಕ್ತಿಯನ್ನು ಕೇರಳದ 1,000 ಕಿಲೋಮೀಟರ್ ಉತ್ತರಕ್ಕೆ ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯಲ್ಲಿ ಬಂಧಿಸಲಾಗಿತ್ತು. ಆರೋಪಿ ಸೈಫಿ(24) ಗಾಯಗೊಂಡಿರುವುದರ ಜತೆಗೆ ಆತನ ಬಿಲಿರುಬಿನ್ ಮಟ್ಟಗಳು ಹೆಚ್ಚಾಗಿದ್ದರಿಂದ ಗುರುವಾರ ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಮತ್ತು ಸೈಫಿಗೆ ನ್ಯಾಯಾಂಗ ಬಂಧನ ವಿಧಿಸಿದರು.

ನಂತರ, ವೈದ್ಯಕೀಯ ಮಂಡಳಿಯು ಸಭೆ ಸೇರಿ ಆರೋಪಿಯ ಆರೋಗ್ಯ ಸ್ಥಿತಿಯನ್ನು ನಿರ್ಣಯಿಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ನಿರ್ಧರಿಸಿತು. ಆತನನ್ನು ಯಾವ ಜೈಲಿಗೆ ಕೊಂಡೊಯ್ಯಬೇಕು ಎಂಬುದನ್ನು ಪೊಲೀಸರು ಇನ್ನಷ್ಟೇ ನಿರ್ಧರಿಸಲಿದ್ದಾರೆ.

ಭಾನುವಾರ ರಾತ್ರಿ 9:30ರ ಸುಮಾರಿಗೆ ರೈಲಿನ ಡಿ1 ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಇದು ಕಾಲ್ತುಳಿತಕ್ಕೆ ಕಾರಣವಾಗಿತ್ತು. ಬೆಂಕಿಯ ಕೆನ್ನಾಲಿಗೆ ಇತರೆ ಕಂಪಾರ್ಟ್ ಮೆಂಟ್ ಗಳಿಗೂ ಹಬ್ಬಿತ್ತು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಸುಟ್ಟ ಗಾಯಗಳಾಗಿದ್ದವು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com