ಮರಾಠವಾಡದಲ್ಲಿ ಭಾರಿ ಅಕಾಲಿಕ ಮಳೆ; ಸಿಡಿಲು ಬಡಿದು ಓರ್ವ ಸಾವು
ಮಹಾರಾಷ್ಟ್ರದ ಮರಾಠವಾಡದಲ್ಲಿ ಭಾರಿ ಅಕಾಲಿಕ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು 25 ಪ್ರಾಣಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
Published: 08th April 2023 04:35 PM | Last Updated: 08th April 2023 04:55 PM | A+A A-

ಸಾಂದರ್ಭಿಕ ಚಿತ್ರ
ಔರಂಗಾಬಾದ್: ಮಹಾರಾಷ್ಟ್ರದ ಮರಾಠವಾಡದಲ್ಲಿ ಭಾರಿ ಅಕಾಲಿಕ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು 25 ಪ್ರಾಣಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ವಿಭಾಗೀಯ ಆಯುಕ್ತರ ಕಚೇರಿಯ ವರದಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಮರಾಠವಾಡದ ಎಲ್ಲಾ ಎಂಟು ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಸುರಿದಿದೆ. ಔರಂಗಾಬಾದ್‌ನಲ್ಲಿ ಅತಿ ಹೆಚ್ಚು ಮಳೆ ಅಂದರೆ 8.9 ಮಿಮೀ ಮಳೆಯಾಗಿದ್ದು, ಲಾತೂರಿನಲ್ಲಿ 8.8 ಮಿಮೀ ಮಳೆಯಾಗಿದೆ.
ಇದನ್ನು ಓದಿ: ಅಕಾಲಿಕ ಮಳೆ ಅವಾಂತರ; ಗದಗದಲ್ಲಿ ಸಿಡಿಲು ಬಡಿದು ಇಬ್ಬರು, ಬಾಗಲಕೋಟೆಯಲ್ಲಿ ಛಾವಣಿ ಕುಸಿದು ಇಬ್ಬರು ಮಹಿಳೆಯರು ಸಾವು
ಸಿಡಿಲು ಬಡಿದು ಸಿಲ್ಲೋಡ್‌ನಲ್ಲಿ ಒಬ್ಬರು ಸಾವನ್ನಪ್ಪಿದ್ದರೆ, ಸೋಯೆಗಾಂವ್‌ನಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ ಕನಿಷ್ಠ 25 ಪ್ರಾಣಿಗಳು ಸಾವನ್ನಪ್ಪಿವೆ, ಔರಂಗಾಬಾದ್‌ನಲ್ಲಿ ಅತಿ ಹೆಚ್ಚು ಅಂದರೆ 12 ಜಾನುವಾರುಗಳು ಪ್ರಾಣ ಕಳೆದುಕೊಂಡಿವೆ.