
ಅತ್ಯಾಚಾರ
ನವದೆಹಲಿ: ರಾಜಸ್ಥಾನದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆಗೈದು ದಹನ ಮಾಡಲಾಗಿದೆ. 30 ವರ್ಷದ ಮಹಿಳೆ ಈ ಹೀನ ಕೃತ್ಯಕ್ಕೆ ಬಲಿಯಾಗಿದ್ದು, ಶೇ.50 ರಷ್ಟು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ.
ಮಹಿಳೆಯ ಪತಿ ನೀಡಿರುವ ಮಾಹಿತಿಯ ಪ್ರಕಾರ, ಶಾಕೂರ್ ಖಾನ್ ಎಂಬಾತ ಮನೆಗೆ ನುಗ್ಗಿ ಏಕಾಂಗಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ, ಆಕೆಯ ಮೇಲೆ ಆಸಿಡ್ ಮಾದರಿಯ ಕೆಮಿಕಲ್ ಎರಚಿ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ವಾಕಪಲ್ಲಿ 11 ಬುಡಕಟ್ಟು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: 13 ಪೊಲೀಸರ ಖುಲಾಸೆ
ಅತ್ಯಾಚಾರವೆಸಗಿದ ಖಾನ್ ಬಂಧನಕ್ಕೊಳಗಾಗಿದ್ದಾನೆ. ಆದರೆ ಪೊಲೀಸರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು, 1 ಕೋಟಿ ರೂಪಾಯಿ ಪರಿಹಾರ, ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ನೌಕರಿ ನೀಡಬೇಕೆಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದು, ಬೇಡಿಕೆ ಈಡೇರುವವರೆಗೂ ಎಂಡಿಹೆಚ್ ಆಸ್ಪತ್ರೆಯ ಶವಾಗಾರದಲ್ಲಿರುವ ಶವವನ್ನು ಪಡೆಯುವುದಿಲ್ಲ ಎಂದು ಹೇಳಿದ್ದಾರೆ.