ಅಗ್ನಿಪಥ ಯೋಜನೆ: ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸಶಸ್ತ್ರ ಪಡೆಗಳಿಗೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಸಶಸ್ತ್ರ ಪಡೆಗಳಿಗೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಅಗ್ನಿಪಥ ಯೋಜನೆಯನ್ನು ಪರಿಚಯಿಸುವ ಮೊದಲು ರಕ್ಷಣಾ ಪಡೆಗಳಿಗೆ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳಂತಹ ನೇಮಕಾತಿ ಪ್ರಕ್ರಿಯೆಗಳ ಮೂಲಕ ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿಯ ಹಕ್ಕನ್ನು ಹೊಂದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರಿದ್ದ ಪೀಠ ಹೇಳಿದೆ.

'ಕ್ಷಮಿಸಿ, ನಾವು ಹೈಕೋರ್ಟ್ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಈ ವಿಚಾರವಾಗಿ ಹೈಕೋರ್ಟ್ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಿದೆ' ಎಂದು ಹೇಳಿದ್ದು, ಹೈಕೋರ್ಟ್ ತೀರ್ಪಿನ ವಿರುದ್ಧ ಗೋಪಾಲ್ ಕ್ರಿಶನ್ ಮತ್ತು ವಕೀಲ ಎಂಎಲ್ ಶರ್ಮಾ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ವಜಾಗೊಳಿಸಿದೆ.

ಆದಾಗ್ಯೂ, ಅಗ್ನಿಪಥ ಯೋಜನೆಯನ್ನು ಪ್ರಾರಂಭಿಸುವ ಮೊದಲು ಭಾರತೀಯ ವಾಯುಪಡೆಯಲ್ಲಿ (ಐಎಎಫ್) ನೇಮಕಾತಿಗೆ ಸಂಬಂಧಿಸಿದ ಮೂರನೇ ಹೊಸ ಮನವಿಯನ್ನು ಪೀಠವು ಏಪ್ರಿಲ್ 17 ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ಐಎಎಫ್‌ನಲ್ಲಿ ನೇಮಕಾತಿಗೆ ಸಂಬಂಧಿಸಿದ ಮೂರನೇ ಮನವಿಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಅದು ಕೇಂದ್ರ ಸರ್ಕಾರವನ್ನು ಕೇಳಿದೆ.

ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ಕೇಂದ್ರದ ಯೋಜನೆಯನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಗಳನ್ನು ಆಲಿಸಲು ಮಾರ್ಚ್ 27 ರಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿತ್ತು.

ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವ ಶ್ಲಾಘನೀಯ ಉದ್ದೇಶದೊಂದಿಗೆ ರಾಷ್ಟ್ರೀಯ ಹಿತಾಸಕ್ತಿಯಿಂದ ಅಗ್ನಿಪಥ ಯೋಜನೆಯನ್ನು ರೂಪಿಸಲಾಗಿದೆ ಎಂದು ಫೆಬ್ರುವರಿ 27 ರಂದು ದೆಹಲಿ ಹೈಕೋರ್ಟ್ ಹೇಳಿತ್ತು.

ಹದಿನೇಳುವರೆ ವರ್ಷದಿಂದ 21 ವರ್ಷದ ವರೆಗಿನ ಯುವಕರನ್ನು 4 ವರ್ಷದ ಮಟ್ಟಿಗೆ ಸಶಸ್ತ್ರ ಪಡೆಗಳಿಗೆ ನೇಮಕ ಮಾಡುವ ಅಗ್ನಿಪಥ ಯೋಜನೆಯನ್ನು ಕೇಂದ್ರ ಸರ್ಕಾರ 2022ರ ಜೂನ್‌ 14 ರಂದು ಜಾರಿಗೆ ತಂದಿತ್ತು. ಇದು ಸೇನೆಗೆ ಸೇರುವ ಆಕಾಂಕ್ಷಿಗಳ ಪ್ರತಿಭಟನೆಗೂ ಕಾರಣವಾಗಿತ್ತು. ಬಳಿಕ ಗರಿಷ್ಠ ವಯೋಮಾನವನ್ನು ಸರ್ಕಾರ 23ಕ್ಕೆ ಏರಿಕೆ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com