ಮುಂದಿನ ವಾರಗಳಲ್ಲಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ; ಶೀಘ್ರದಲ್ಲೇ ಶಾಲೆಗಳಿಗೆ ಮಾರ್ಗಸೂಚಿ: ಶಿಕ್ಷಣ ಸಚಿವೆ ಅತಿಶಿ
ಕೋವಿಡ್-19 ಪ್ರಕರಣಗಳ ತೀವ್ರತೆಯ ಮಧ್ಯೆ, ಸರ್ಕಾರವು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದೆ ಮತ್ತು ಶೀಘ್ರದಲ್ಲೇ ಶಾಲೆಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ದೆಹಲಿ ಶಿಕ್ಷಣ ಸಚಿವೆ ಅತಿಶಿ ಗುರುವಾರ ಹೇಳಿದ್ದಾರೆ.
Published: 13th April 2023 03:49 PM | Last Updated: 13th April 2023 03:49 PM | A+A A-

ಪ್ರಾತಿನಿಧಿಕ ಚಿತ್ರ
ನವದೆಹಲಿ: ಕೋವಿಡ್-19 ಪ್ರಕರಣಗಳ ತೀವ್ರತೆಯ ಮಧ್ಯೆ, ಸರ್ಕಾರವು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದೆ ಮತ್ತು ಶೀಘ್ರದಲ್ಲೇ ಶಾಲೆಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ದೆಹಲಿ ಶಿಕ್ಷಣ ಸಚಿವೆ ಅತಿಶಿ ಗುರುವಾರ ಹೇಳಿದ್ದಾರೆ.
ಆರೋಗ್ಯ ಇಲಾಖೆ ಹಂಚಿಕೊಂಡ ಮಾಹಿತಿಯ ಪ್ರಕಾರ, ದೆಹಲಿಯಲ್ಲಿ ದೈನಂದಿನ ಪಾಸಿಟಿವಿಟಿ ದರ ಶೇ 23.8 ಕ್ಕೆ ಏರಿಕೆಯಾಗಿದ್ದು, ಕಳೆದ ಏಳು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಹೊಸ ಪ್ರಕರಣಗಳ ಸಂಖ್ಯೆ 1,000 ಮೀರಿದೆ.
ಇಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅತಿಶಿ, 'ನಮ್ಮ ಸರ್ಕಾರವು ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದೆ ಮತ್ತು ಈ ನಿಟ್ಟಿನಲ್ಲಿ ಎಲ್ಲಾ ಶಾಲೆಗಳಿಗೆ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಹೊರಡಿಸಲಾಗುವುದು' ಎಂದರು.
ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ 1,149 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಮತ್ತು ಒಂದು ಸಾವು ಸಂಭವಿಸಿದೆ.
ಮುಂದಿನ ಒಂದೆರಡು ವಾರಗಳಲ್ಲಿ ಗರಿಷ್ಠ ಪ್ರಕರಣಗಳು
ನವಜಾತ ಶಿಶುವೊಂದಕ್ಕೆ ಕೋವಿಡ್-19 ಪಾಸಿಟಿವ್ ಆಗಿದ್ದು, ಇಲ್ಲಿನ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಸೋಂಕು ಪ್ರಕರಣಗಳು ಮುಂದಿನ ಎರಡು ವಾರಗಳಲ್ಲಿ ಗರಿಷ್ಠಗೊಳ್ಳುತ್ತವೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಗುರುವಾರ ಎಚ್ಚರಿಸಿದ್ದಾರೆ.
ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸುರೇಶ್ ಕುಮಾರ್ ಅವರು ಪಿಟಿಐ ಜೊತೆಗಿನ ಸಂವಾದದಲ್ಲಿ, ಆಸ್ಪತ್ರೆಯೊಳಗೆ ಮಾಸ್ಕ್ ಧರಿಸುವುದನ್ನು 'ಕಡ್ಡಾಯ' ಮಾಡಲಾಗಿದೆ ಎಂದು ತಿಳಿಸಿದರು.
2,000 ಹಾಸಿಗೆಗಳ ಬ್ರಿಟಿಷರ ಕಾಲದ ಆಸ್ಪತ್ರೆಯು ದೆಹಲಿ ಸರ್ಕಾರದ ಅಡಿಯಲ್ಲಿರುವ ಅತಿದೊಡ್ಡ ಆಸ್ಪತ್ರೆಯಾಗಿದೆ.
ಮಕ್ಕಳಿಗೆ ಲಸಿಕೆ ಹಾಕಿಲ್ಲ, ಆದ್ದರಿಂದ ಜ್ವರ, ಕೆಮ್ಮು, ಕಣ್ಣಿನ ಸೋಂಕು ಮತ್ತು ಹೊಟ್ಟೆಯ ಸೋಂಕಿನಂತಹ ಲಕ್ಷಣಗಳು ಕಂಡುಬರುವುದರಿಂದ ನಾವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗಿದೆ. ಈ XBB.1.16 ರೂಪಾಂತರವು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ.