ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪುತ್ರಿ ಚಂದಾಗೆ ಇಡಿ ತೀವ್ರ ವಿಚಾರಣೆ

ರೈಲ್ವೆಯಲ್ಲಿನ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಚಂದಾ ಯಾದವ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ತೀವ್ರ
ಚಂದಾ ಯಾದವ್
ಚಂದಾ ಯಾದವ್

ನವದೆಹಲಿ: ರೈಲ್ವೆಯಲ್ಲಿನ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಚಂದಾ ಯಾದವ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ತೀವ್ರ ವಿಚಾರಣೆಗೆ ಒಳಪಡಿಸಿದೆ.

ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾದ ಚಂದಾ ಯಾದವ್ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರಿಗೆ ಒಂಬತ್ತು ಮಕ್ಕಳಿದ್ದು, ಚಂದಾ ಯಾದವ್ ಅವರು ಇಡಿ ಮುಂದೆ ವಿಚಾರಣೆಗೆ ಹಾಜರಾದ ನಾಲ್ಕನೆ ಮಗಳಾಗಿದ್ದಾರೆ.

ಬುಧವಾರ, ಅವರ ಇತರ ಪುತ್ರಿಯರಲ್ಲಿ ಒಬ್ಬರಾದ ರಾಗಿಣಿ ಯಾದವ್ ಅವರನ್ನು ಅವರ ಸಂಸದೆ-ಮಗಳು ಮಿಸಾ ಭಾರತಿ ಅವರಂತೆಯೇ ಪ್ರಶ್ನಿಸಲಾಯಿತು. ಅವರ ಪುತ್ರ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಇಡಿಯ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು.

ಈ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಸೋಮವಾರ ತೇಜಸ್ವಿ ಯಾದವ್ ಅವರನ್ನು ವಿಚಾರಣೆ ನಡೆಸಿ ಅವರು ಹೇಳಿಕೆ ದಾಖಲಿಸಿಕೊಂಡಿತ್ತು.

ಕಳೆದ ಮಾರ್ಚ್ 15 ರಂದು ಸಿಬಿಐ ವಿಶೇಷ ನ್ಯಾಯಾಲಯವು ತೇಜಸ್ವಿ ಯಾದವ್ ಅವರ ತಂದೆ ಲಾಲು ಪ್ರಸಾದ್ ಯಾದವ್, ತಾಯಿ ರಾಬ್ರಿ ದೇವಿ, ಸಹೋದರಿ ಮಿಸಾ ಭಾರತಿ ಮತ್ತು ಇತರರಿಗೆ ಉದ್ಯೋಗಕ್ಕಾಗಿ ಭೂ ಹಗರಣದ ಪ್ರಕರಣದಲ್ಲಿ ಜಾಮೀನು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com