2024ಕ್ಕೆ ಪ್ರಧಾನ ಮಂತ್ರಿ ಹುದ್ದೆ ಖಾಲಿ ಇಲ್ಲ: ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಹಿರಿಯ ಸಮಾಜವಾದಿ ನಾಯಕ ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ ನಂತರ ಗುರುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು,  2024ರ ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದಿದ್ದಾರೆ.
ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಪಾಟ್ನಾ: ಹಿರಿಯ ಸಮಾಜವಾದಿ ನಾಯಕ ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ ನಂತರ ಗುರುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು,  2024ರ ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ನಂತರವೂ ಪ್ರಧಾನಿ ಹುದ್ದೆ ಬಿಜೆಪಿ ನಾಯಕ ನರೇಂದ್ರ ಮೋದಿ ಅವರ ಬಳಿಯೇ ಇರುತ್ತದೆ ಎಂದು ಪ್ರತಿಪಾದಿಸಿದ ಸಿಂಗ್, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶವು ಹೊಸ ಎತ್ತರಕ್ಕೇರುತ್ತಿದೆ ಎಂದು ಹೇಳಿದ್ದಾರೆ.

ಮಹೇಂದ್ರು ಘಾಟ್‌ನಲ್ಲಿರುವ ಪೂರ್ವ ಮಧ್ಯ ರೈಲ್ವೆ ವಲಯ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಪ್ರಧಾನಿಯಾಗಲು ಬಯಸುತ್ತಾರೆ. ಆದರೆ, 2024ಕ್ಕೆ ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂಬುದನ್ನು ಜನರು ತಿಳಿದುಕೊಳ್ಳಬೇಕು ಎಂದರು.

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ಮೈತ್ರಿಯನ್ನು ರೂಪಿಸುವ ಪ್ರಯತ್ನವಾಗಿ ಬಿಹಾರ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 

ಕಾಂಗ್ರೆಸ್ ನಾಯಕರೊಂದಿಗಿನ ಸಭೆಯ ನಂತರ ನಿತೀಶ್ ಕುಮಾರ್ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದರು.

ನಿತೀಶ್ ಕುಮಾರ್ ಹೆಸರನ್ನು ಉಲ್ಲೇಖಿಸದೆ ಸಿಂಗ್, ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿರುವವರು ಜನರಿಗೆ ಉದ್ಯೋಗ ನೀಡುವ ಬಗ್ಗೆ ಯೋಚಿಸಲು ಸಾಧ್ಯವಿಲ್ಲ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶವು ಹೊಸ ಎತ್ತರಕ್ಕೆ ಏರುತ್ತಿದೆ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು ನೀಡಲಾಗಿದೆ ಎಂದು ಹೇಳಿದರು.

ಸದ್ಯದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಸಚಿವರು, ಇತರ ವಿಷಯಗಳ ಜೊತೆಗೆ ಅತಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ಭಾರತವನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡಲು ಸಹಾಯ ಮಾಡುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com