1ನೇ ತರಗತಿ ವಿದ್ಯಾರ್ಥಿಯಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು
ಮುಜಾಫರ್‌ನಗರ ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
Published: 16th April 2023 02:31 PM | Last Updated: 16th April 2023 02:31 PM | A+A A-

ಸಾಂದರ್ಭಿಕ ಚಿತ್ರ
ಮುಜಾಫರ್‌ನಗರ: ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಶನಿವಾರ ಬಾಲಕಿಯನ್ನು ಶಾಲೆಯ ಟೆರೇಸ್‌ಗೆ ಕರೆದೊಯ್ದು ಬಾಲಕ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿಯ ಕುಟುಂಬಸ್ಥರು ನೀಡಿದ ದೂರನ್ನುಆಧರಿಸಿ ಪೊಲೀಸರು ತಿಳಿಸಿದ್ದಾರೆ.
ಬಾಲಕ 1ನೇ ತರಗತಿ ವಿದ್ಯಾರ್ಥಿಯಾಗಿದ್ದರೆ, ಬಾಲಕಿ ಪ್ಲೇಗ್ರೂಪ್ ವಿದ್ಯಾರ್ಥಿನಿ.