ಅಧಿಕಾರಕ್ಕೇರಲು ಅಣ್ಣಾ ಹಜಾರೆಯನ್ನು ಆಮ್ ಆದ್ಮಿ ಪಕ್ಷ ಬಳಸಿಕೊಂಡಿದೆ: ಕಾನೂನು ಸಚಿವ ಕಿರಣ್ ರಿಜಿಜು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ  ಹಗರಣ ಪ್ರಕರಣದಲ್ಲಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ. 
ಕಿರಣ್ ರಿಜಿಜು
ಕಿರಣ್ ರಿಜಿಜು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ  ಹಗರಣ ಪ್ರಕರಣದಲ್ಲಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಹೆಸರಿನಲ್ಲಿ ಅಧಿಕಾರ ಹಿಡಿಯಲು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರನ್ನು ಆಮ್ ಆದ್ಮಿ ಪಕ್ಷ ಬಳಸಿಕೊಂಡಿದೆ ಎಂದು ಆರೋಪಿಸಿದರು.

ರಿಜಿಜು ಅವರು ಅಣ್ಣಾ ಹಜಾರೆಯವರ ಹಳೆಯ ಸಂದರ್ಶನದ ವಿಡಿಯೋ ತುಣುಕುಗಳನ್ನು ಹಂಚಿಕೊಂಡಿದ್ದು, ಇದರಲ್ಲಿ ಅವರು ದೆಹಲಿ ಅಬಕಾರಿ ನೀತಿಯನ್ನು ಟೀಕಿಸಿದ್ದಾರೆ ಎಂದು ಹೇಳಲಾಗಿದೆ.

'ಈಗ ಅವರು ಅಧಿಕಾರಕ್ಕೇರಿದ್ದಾರೆ. ಅವರು ಅಣ್ಣಾಜಿಯ ಮಾತನ್ನು ಕೇಳುವುದಿಲ್ಲ ಎಂದು ನನಗೆ ಖಾತ್ರಿಯಿದೆ. ಅಣ್ಣಾಜಿ ಮತ್ತು ಜನರನ್ನು ಮೂರ್ಖರನ್ನಾಗಿಸಲು ಭ್ರಷ್ಟಾಚಾರ ನಿರ್ಮೂಲನೆ ಒಂದು ನೆಪವಾಗಿತ್ತು. ಅಧಿಕಾರ ಹಿಡಿಯಲು ಮತ್ತು ಭ್ರಷ್ಟಾಚಾರ ನಿರ್ಮೂಲನೆ ಹೆಸರಿನಲ್ಲಿ ಸಂಪನ್ಮೂಲಗಳನ್ನು ಲೂಟಿ ಮಾಡಲು ಮಾತ್ರ ಅಣ್ಣಾಜಿಯನ್ನು ಬಳಸಿಕೊಳ್ಳಲಾಗಿದೆ' ಎಂದು ಕೇಂದ್ರ ಸಚಿವರು ಟ್ವಿಟರ್‌ನಲ್ಲಿ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಬರೆದಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com