ಮಧ್ಯಪ್ರದೇಶ: ಕೋವಿಡ್ ನಲ್ಲಿ ಮೃತಪಟ್ಟ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್!

ಕೋವಿಡ್-19 ಎರಡನೇ ಅಲೆಯಲ್ಲಿ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್ಸಾದ ಘಟನೆ ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಕೋವಿಡ್ ನಿಂದ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ಕಮಲೇಶ್ ಪಾಟಿದಾರ್  ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕರೋಡ್ಕಳ ಗ್ರಾಮದ ತನ್ನ ಚಿಕ್ಕಮ್ಮನ ಮನೆಗೆ ಬಂದು ಅಚ್ಚರಿ ಮೂಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಧ್ಯಪ್ರದೇಶ: ಕೋವಿಡ್-19 ಎರಡನೇ ಅಲೆಯಲ್ಲಿ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್ಸಾದ ಘಟನೆ ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಕೋವಿಡ್ ನಿಂದ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ಕಮಲೇಶ್ ಪಾಟಿದಾರ್  ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕರೋಡ್ಕಳ ಗ್ರಾಮದ ತನ್ನ ಚಿಕ್ಕಮ್ಮನ ಮನೆಗೆ ಬಂದು ಅಚ್ಚರಿ ಮೂಡಿಸಿದ್ದಾರೆ. 

ಕಮಲೇಶ್ ಮೃತಪಟ್ಟಿದ್ದಾರೆಂದು  ಅಂತ್ಯಸಂಸ್ಕಾರ ಮುಗಿಸಿದ ಎರಡು ವರ್ಷಗಳ ನಂತರ ಅವರ ಮನೆಗೆ ಬಂದಿರುವುದಾಗಿ ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ. ಕಮಲೇಶ್ ಕೋವಿಡ್ 19 ಎರಡನೇ ಅಲೆಯಲ್ಲಿ ಸೋಂಕಿಗೆ ಒಳಗಾಗಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಪ್ರಕಟಿಸಿದ್ದರು. 

ಆಸ್ಪತ್ರೆಯವರು ಕಮಲೇಶ್ ಮೃತದೇಹವನ್ನು ನೀಡಿದ ನಂತರ ಕುಟುಂಬ ಸದಸ್ಯರು ಅಂತಿಮ ಸಂಸ್ಕಾರ ನಡೆಸಿದ್ದರು ಎಂದು ಅವರ ಸಂಬಂಧಿ ಮುಕೇಶ್ ಪಾಟಿದಾರ್ ಸುದ್ದಿಗಾರರಿಗೆ ತಿಳಿಸಿದರು.  ಆದರೆ, ಇದೀಗ ಕಮಲೇಶ್ ಮತ್ತೆ ಬದುಕಿ ಬಂದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. 

ಕಮಲೇಶ್ ಪಾಟಿದಾರ್ ಇಷ್ಟು ದಿನ ಎಲ್ಲಿದ್ದರು? ಆಸ್ಪತ್ರೆಯವರು ಅಂತ್ಯಕ್ರಿಯೆ ನಡೆಸಿದ ಮೃತದೇಹ ಯಾರದ್ದು? ಎಂಬೆಲ್ಲ ಪ್ರಶ್ನೆಗಳು ಮೂಡಿದ್ದು, ಕಣ್ವನ್ ಪೊಲೀಸ್ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com