ಕೋವಿಡ್-19: ದಿನವೊಂದರಲ್ಲಿ 7,633 ಹೊಸ ಪ್ರಕರಣ, 61 ಸಾವಿರ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ
ದೇಶದಾದ್ಯಂತ ಕೋವಿಡ್ ಭೀತಿ ಮತ್ತೆ ಆವರಿಸುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7,633 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 61,233 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
Published: 18th April 2023 10:09 AM | Last Updated: 18th April 2023 10:13 AM | A+A A-

ಪ್ರಾತಿನಿಧಿಕ ಚಿತ್ರ
ನವದೆಹಲಿ: ದೇಶದಾದ್ಯಂತ ಕೋವಿಡ್ ಭೀತಿ ಮತ್ತೆ ಆವರಿಸುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7,633 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 61,233 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಇದೇ ಅವಧಿಯಲ್ಲಿ 11 ಮಂದಿ ಸಾವಿಗೀಡಾಗಿದ್ದು, ಈವರೆಗೆ ದೇಶದಲ್ಲಿ ಕೋವಿಡ್‌ನಿಂದ 5,31,152 ಮಂದಿ ಮೃತಪಟ್ಟಿದ್ದಾರೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೆಹಲಿ ಮತ್ತು ಕೇರಳದಲ್ಲಿ ತಲಾ ನಾಲ್ವರು, ಹರಿಯಾಣ, ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.