ಮೊರ್ಬಿ ಸೇತುವೆ ದುರಂತ: ಒರೆವಾ ಕಂಪನಿಯಿಂದ ಸಂತ್ರಸ್ತರಿಗೆ 14.62 ಕೋಟಿ ರೂ. ಮಧ್ಯಂತರ ಪರಿಹಾರ

ಕಳೆದ ಫೆಬ್ರವರಿಯಲ್ಲಿ ಗುಜರಾತ್ ಹೈಕೋರ್ಟ್ ನಿರ್ದೇಶನದಂತೆ ಒರೆವಾ ಗ್ರೂಪ್ ಮೊರ್ಬಿ ಸೇತುವೆ ದುರಂತದ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ನೀಡಲು 14.62 ಕೋಟಿ ರೂಪಾಯಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ...
ಮೊರ್ಬಿ ತೂಗು ಸೇತುವೆ ದುರಂತ
ಮೊರ್ಬಿ ತೂಗು ಸೇತುವೆ ದುರಂತ

ಅಹಮದಾಬಾದ್: ಕಳೆದ ಫೆಬ್ರವರಿಯಲ್ಲಿ ಗುಜರಾತ್ ಹೈಕೋರ್ಟ್ ನಿರ್ದೇಶನದಂತೆ ಒರೆವಾ ಗ್ರೂಪ್ ಮೊರ್ಬಿ ಸೇತುವೆ ದುರಂತದ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ನೀಡಲು 14.62 ಕೋಟಿ ರೂಪಾಯಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ ಇರಿಸಿದೆ ಎಂದು ಕಂಪನಿ ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ.

ಕಳೆದ ವರ್ಷ ಅಕ್ಟೋಬರ್ 30 ರಂದು ಮೊರ್ಬಿ ಪಟ್ಟಣದಲ್ಲಿ ತೂಗು ಸೇತುವೆ ಕುಸಿದು ಬಿದ್ದು 135 ಜನ ಸಾವನ್ನಪ್ಪಿದ್ದರು.

ಒರೆವಾ ಗ್ರೂಪ್ ಬ್ರಿಟಿಷರ ಕಾಲದ ಈ ತೂಗು ಸೇತುವೆಯ ಕಾರ್ಯಾಚರಣೆ ಮತ್ತು ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡಿತ್ತು.

ಸಂತ್ರಸ್ತರಿಗೆ ಮಧ್ಯಂತರ ಪರಿಹಾರವಾಗಿ ನೀಡಬೇಕಾದ ಸಂಪೂರ್ಣ 14.62 ಕೋಟಿ ರೂ.ಗಳನ್ನು ಗುಜರಾತ್ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಠೇವಣಿ ಮಾಡಲಾಗಿದೆ ಎಂದು ಒರೆವಾ ಕಂಪನಿಯು, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಜೆ ದೇಸಾಯಿ ಮತ್ತು ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ವಿಭಾಗೀಯ ಪೀಠಕ್ಕೆ ತಿಳಿಸಿದೆ.

ವಿಭಾಗೀಯ ಪೀಠ, ಫೆಬ್ರವರಿ 22 ರಂದು ನೀಡಿದ ಆದೇಶದಂತೆ ಪರಿಹಾರದ ಮೊತ್ತವನ್ನು ವಿತರಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಈ ಆದೇಶದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳ ನೆರವಿನೊಂದಿಗೆ ಸಂತ್ರಸ್ತರಿಗೆ ಪರಿಹಾರ ಹಂಚಿಕೆಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಗುಜರಾತ್ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com