ಮತ್ತೊಂದು "ಮಹಾ" ರಾಜಕೀಯ ಬೆಳವಣಿಗೆ: ಬಿಜೆಪಿ ಬೆಂಬಲಿಸಲು ಅಜಿತ್ ಪವಾರ್ ಬಣದ 30 ಎನ್ ಸಿಪಿ ಶಾಸಕರು ಮುಂದು!

ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ. 
ಅಜಿತ್ ಪವಾರ್
ಅಜಿತ್ ಪವಾರ್

ಮುಂಬೈ: ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ. 

ಈಗ ಎನ್ ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿಯೊಂದಿಗೆ ಕೈ ಜೋಡಿಸಲು ಮುಂದಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ನಾಯಕ ಸಂಜಯ್ ರೌತ್ ಇತ್ತೀಚೆಗೆ ಮಾತನಾಡಿ, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ, ತಮ್ಮ ಪಕ್ಷ ಎಂದಿಗೂ ಬಿಜೆಪಿ ಜೊತೆ ಕೈ ಜೋಡಿಸುವುದಿಲ್ಲ ಎಂದು ಹೇಳಿದ್ದರು.

ಆದರೆ ಇತ್ತ ಎನ್ ಸಿಪಿಯಲ್ಲಿನ ಅಜಿತ್ ಪವಾರ್ ಅವರ ಬೆಂಬಲಿಗ ಶಾಸಕರ ಪೈಕಿ ಇಬ್ಬರು ತಾವು ಅಜಿತ್ ಪವಾರ್ ಯಾವುದೇ ನಿರ್ಧಾರ ಕೈಗೊಂಡರೂ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
 
ಇನ್ನು ಎನ್ ಸಿಪಿಯ ಹಿರಿಯ ನಾಯಕ ಪುಣೆಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದನ್ನು ರದ್ದುಗೊಳಿಸಿ ದೆಹಲಿಗೆ ಏಕಾ ಏಕಿ ಭೇಟಿ ನೀಡಿದ್ದು ಹಲವು ಅನುಮಾನಗಳು, ಊಹಾಪೋಹಗಳಿಗೆ ದಾರಿಮಾಡಿಕೊಟ್ಟಿವೆ. 

ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 16 ಶಾಸಕರ ಅನರ್ಹತೆ ಅರ್ಜಿ ಸುಪ್ರೀಂ ಕೋರ್ಟ್ ಎದುರು ಬಾಕಿ ಇದ್ದು, ಎನ್ ಸಿಪಿಯ 34-53 ಶಾಸಕರು ಅಜಿತ್ ಪವಾರ್ ಬಿಜೆಪಿ ಜೊತೆ ಕೈ ಜೋಡಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com