ಜಮ್ಮು ಮತ್ತು ಕಾಶ್ಮೀರದ 6 ಜಿಲ್ಲೆಗಳಲ್ಲಿ ಹಿಮಪಾತದ ಎಚ್ಚರಿಕೆ

ಜಮ್ಮು ಮತ್ತು ಕಾಶ್ಮೀರ ವಿಪತ್ತು ನಿರ್ವಹಣಾ ಪ್ರಾಧಿಕಾರವು ಬುಧವಾರ ಕೇಂದ್ರಾಡಳಿತ ಪ್ರದೇಶದ ಆರು ಜಿಲ್ಲೆಗಳಲ್ಲಿ ಹಿಮಪಾತದ ಎಚ್ಚರಿಕೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಪತ್ತು ನಿರ್ವಹಣಾ ಪ್ರಾಧಿಕಾರವು ಬುಧವಾರ ಕೇಂದ್ರಾಡಳಿತ ಪ್ರದೇಶದ ಆರು ಜಿಲ್ಲೆಗಳಲ್ಲಿ ಹಿಮಪಾತದ ಎಚ್ಚರಿಕೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ದೋಡಾ, ಕಿಶ್ತ್ವಾರ್, ಪೂಂಚ್, ರಾಂಬನ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಸಮುದ್ರ ಮಟ್ಟದಿಂದ 3,000 ರಿಂದ 3,500 ಮೀಟರ್ ಎತ್ತರದಲ್ಲಿ ಕಡಿಮೆ ಅಪಾಯದ ಹಿಮಪಾತ ಸಂಭವಿಸುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಗಂದರ್‌ಬಾಲ್ ಜಿಲ್ಲೆಯಲ್ಲಿ 2,800 ಮೀಟರ್‌ಗಿಂತ ಎತ್ತರದಲ್ಲಿ ಮಧ್ಯಮ ಅಪಾಯ ಮಟ್ಟದ ಹಿಮಪಾತ ಸಂಭವಿಸುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ಆದೇಶದವರೆಗೆ ಈ ಜಿಲ್ಲೆಗಳಲ್ಲಿ ವಾಸಿಸುವ ಜನ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಮತ್ತು ಹಿಮಪಾತ ಪೀಡಿತ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com