ಟಿಎಂಸಿ ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕಾಗಿ ಅಮಿತ್ ಶಾಗೆ ಕರೆ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡುತ್ತೇನೆ: ಮಮತಾ

ತೃಣಮೂಲ ಕಾಂಗ್ರೆಸ್(ಟಿಎಂಸಿ) ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಕಳೆದುಕೊಂಡ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿರುವುದು ಸಾಬೀತಾದರೆ, ನಾನು ರಾಜೀನಾಮೆ ನೀಡುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್(ಟಿಎಂಸಿ) ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಕಳೆದುಕೊಂಡ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿರುವುದು ಸಾಬೀತಾದರೆ, ನಾನು ರಾಜೀನಾಮೆ ನೀಡುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ತಮ್ಮ ಪಕ್ಷದ ಹೆಸರು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಆಗಿ ಉಳಿಯುತ್ತದೆ ಎಂದು ಹೇಳಿದರು. ರಾಷ್ಟ್ರೀಯ ಪಕ್ಷದ ಸ್ಥಾನಕ್ಕಾಗಿ ಮಮತಾ ಬ್ಯಾನರ್ಜಿ ಅವರು ಅಮಿತ್ ಶಾ ಅವರಿಗೆ ಕರೆ ಮಾಡಿದ್ದರು ಎಂದು ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂಧು ಅಧಿಕಾರಿ ಹೇಳಿಕೆಯನ್ನು ಬ್ಯಾನರ್ಜಿ ತಿರಸ್ಕರಿಸಿದ್ದಾರೆ.

ಚುನಾವಣಾ ಆಯೋಗವು ಟಿಎಂಸಿಯ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ರದ್ದುಗೊಳಿಸಿದಾಗ, ಬ್ಯಾನರ್ಜಿ ಅವರು ಅಮಿತ್ ಶಾ ಅವರನ್ನು ಕರೆದು ನಿರ್ಧಾರವನ್ನು ಹಿಂಪಡೆಯುವಂತೆ ಮನವಿ ಮಾಡಿದರು ಎಂದು ಸುವೇಂದು ಅಧಿಕಾರಿ ಹೇಳಿದ್ದರು.

ಬ್ಯಾನರ್ಜಿ ಅವರು ಟಿಎಂಸಿ ಮುಖ್ಯಸ್ಥರೂ ಆಗಿದ್ದಾರೆ. 10 ವರ್ಷಗಳ ಬಳಿಕ ಎಲ್ಲ ಪಕ್ಷಗಳ ರಾಷ್ಟ್ರೀಯ ಪಕ್ಷದ ಸ್ಥಿತಿಗತಿ ಪರಿಶೀಲಿಸುವ ನಿಯಮ ಬಂದಿದೆ. ಇದರರ್ಥ ಮುಂದಿನ ವಿಮರ್ಶೆಯು 2026ರಲ್ಲಿ ನಡೆಯಬೇಕಿತ್ತು ಎಂದರು. ನನ್ನ ಪಕ್ಷದ ಹೆಸರು 'ಅಖಿಲ ಭಾರತ ತೃಣಮೂಲ ಕಾಂಗ್ರೆಸ್' ಎಂದು ಅವರು ಹೇಳಿದರು. ಬಿಜೆಪಿಗೆ ಯಾವುದೇ ಸಮಸ್ಯೆಯಿದ್ದರೆ ಅವರು ಚುನಾವಣಾ ಆಯೋಗವನ್ನು ಸಂಪರ್ಕಿಸಬಹುದು. ನಾವು ಮಾತ್ರ ಸಾಮಾನ್ಯ ಜನರನ್ನು ಸಂಪರ್ಕಿಸುತ್ತೇವೆ ಎಂದರು.

ಭಾರತದ ಚುನಾವಣಾ ಆಯೋಗವು ಕಳೆದ ವಾರ ಟಿಎಂಸಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಹಿಂಪಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com