social_icon

ಮೋದಿ ಉಪನಾಮ ಹೇಳಿಕೆ: ರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ, ತಡೆಯಾಜ್ಞೆ ನೀಡಲು ಕೋರ್ಟ್ ನಕಾರ

ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

Published: 20th April 2023 11:36 AM  |   Last Updated: 20th April 2023 05:01 PM   |  A+A-


Rahul gandhi

ರಾಹುಲ್ ಗಾಂಧಿ

Posted By : Manjula VN
Source : Online Desk

ಸೂರತ್: ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಈ ಹಿಂದೆ ರಾಹುಲ್ ಗಾಂಧಿಯವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದಕ್ಕೆ ನ್ಯಾಯಾಲಯ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿ ಸಲ್ಲಿಸಿದ್ದ ಮನವಿ ತಿರಸ್ಕಾರ; ಕಾನೂನಿನಡಿ ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಬಳಸಿಕೊಳ್ಳುತ್ತೇವೆ: ಕಾಂಗ್ರೆಸ್

ವಯನಾಡ್‌ ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್‌ ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಗಿತ್ತು.

2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಶಾಶ್ವತ ವಿನಾಯಿತಿ!

ರಾಹುಲ್​ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಗುಜರಾತ್​ನ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ಮಹತ್ವದ ತೀರ್ಪು ನೀಡಿತ್ತು.

ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೆ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡವನ್ನು ವಿಧಿಸಿತ್ತು. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿ, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿತ್ತು.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • GN Raju

    Much before lallu of Bihar fame came under the glare of the public,and subsequently the judiciary, the refrain of such politicians, including the recently convicted rahul-ex MP of Wayanad,has always been that the judiciary has their full confidence.That is till such time they are convicted, for eg Rahul gandhi.once the conviction iis passed,then their true colours emerge.Including those of his followers, mostly those who are well educated, well informed and cultured.the judiciary come under cloud,are defamed for partiality, the government, normally modi,are blamed for the conviction, their bias against the family rtc . The convicted becomes a crucified messiah with an halo,who fearlessly crusaded for what he thought was the absolute truth.Fotgotten are his acts of immaturity, tearing an ordinance of his own govt, bringing down the image of the country in foreign land ,shakinng hands of the PM in the parliament while simultaneously winking at the opposition benches across,etc.there are other cases pending against him and his family, one of the main being meeting with the Chinese etc,an act by a commoner would have resulted in serious consequences.All accusations should be pursued vigorously to its logical end. GN Raju
    5 months ago reply
flipboard facebook twitter whatsapp