ಕೃಷಿ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ: ಮಹಾ ಸಿಎಂ ಶಿಂಧೆ ಆದೇಶ
ಇತ್ತೀಚಿನ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ರೈತರು ಅನುಭವಿಸಿದ ನಷ್ಟವನ್ನು ಗಮನದಲ್ಲಿಟ್ಟುಕೊಂಡು, ನಾಸಿಕ್ ಜಿಲ್ಲೆಯಲ್ಲಿ ಅಲ್ಪಾವಧಿ ಕೃಷಿ ಸಾಲವನ್ನು ಬಲವಂತವಾಗಿ ವಸೂಲಿ ಮಾಡದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್...
Published: 20th April 2023 10:23 PM | Last Updated: 20th April 2023 10:23 PM | A+A A-

ಏಕನಾಥ್ ಶಿಂಧೆ
ಮುಂಬೈ: ಇತ್ತೀಚಿನ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ರೈತರು ಅನುಭವಿಸಿದ ನಷ್ಟವನ್ನು ಗಮನದಲ್ಲಿಟ್ಟುಕೊಂಡು, ನಾಸಿಕ್ ಜಿಲ್ಲೆಯಲ್ಲಿ ಅಲ್ಪಾವಧಿ ಕೃಷಿ ಸಾಲವನ್ನು ಬಲವಂತವಾಗಿ ವಸೂಲಿ ಮಾಡದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಗುರುವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉತ್ತರ ಮಹಾರಾಷ್ಟ್ರ ಜಿಲ್ಲೆಯ ರೈತರ ನಿಯೋಗದೊಂದಿಗೆ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಅವರು ಈ ನಿರ್ದೇಶನ ನೀಡಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಬಿಸಿಲಿನ ಝಳಕ್ಕೆ 14 ಮಂದಿ ಸಾವು: ನ್ಯಾಯಾಂಗ ತನಿಖೆಗೆ ಅಜಿತ್ ಪವಾರ್ ಒತ್ತಾಯ
ಇತ್ತೀಚೆಗೆ, ನಾಸಿಕ್ ಜಿಲ್ಲಾ ಬ್ಯಾಂಕ್ ಮಾಲೀಕರು, ಕೃಷಿ ಸಾಲ ಮರುಪಾವತಿಸಲು ವಿಫಲವಾದ ಕೆಲವು ರೈತರ ಜಮೀನುಗಳನ್ನು ವಶಪಡಿಸಿಕೊಳ್ಳಲು ಮತ್ತು ಹರಾಜಿಗೆ ಆದೇಶಿಸಿತ್ತು.