ನರೋಡಾ ಗಾಮ್ ಹತ್ಯಾಕಾಂಡದ ತೀರ್ಪು 'ಕಾನೂನು, ಸಂವಿಧಾನದ ಕಗ್ಗೊಲೆ': ಶರದ್ ಪವಾರ್

2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಮತ್ತು ಬಜರಂಗದಳ ಮಾಜಿ ನಾಯಕ ಬಾಬು ಬಜರಂಗಿ ಸೇರಿದಂತೆ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಿರುವುದು "ಕಾನೂನು...
ಶರದ್ ಪವಾರ್
ಶರದ್ ಪವಾರ್
Updated on

ಮುಂಬೈ: 2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಮತ್ತು ಬಜರಂಗದಳ ಮಾಜಿ ನಾಯಕ ಬಾಬು ಬಜರಂಗಿ ಸೇರಿದಂತೆ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಿರುವುದು "ಕಾನೂನು ಮತ್ತು ಸಂವಿಧಾನದ ಕಗ್ಗೊಲೆ" ಎಂದು ಶುಕ್ರವಾರ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪನಗರ ಘಾಟ್‌ಕೋಪರ್‌ನಲ್ಲಿ ನಡೆದ ಎನ್ ಸಿಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶರದ್ ಪವಾರ್, ಖಾರ್ಘರ್‌ನಲ್ಲಿ ನಡೆದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ 14 ಜನರ ಸಾವಿಗೆ ಮಹಾರಾಷ್ಟ್ರ ಸರ್ಕಾರವೇ ಹೊಣೆ ಎಂದು ಆರೋಪಿಸಿದರು ಮತ್ತು ಆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಗೋಧ್ರಾ ರೈಲು ದಹನ ಘಟನೆಯ ನಂತರ 2002 ರಲ್ಲಿ ಅಹಮದಾಬಾದ್‌ನ ನರೋಡಾ ಗಾಮ್ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ 11 ಮುಸ್ಲಿಮರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಎಲ್ಲಾ 67 ಆರೋಪಿಗಳನ್ನು ಗುಜರಾತ್‌ನ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

'ಕಾನೂನು ಮತ್ತು ಸಂವಿಧಾನದ ಕಗ್ಗೊಲೆ ಮಾಡಲಾಗಿದೆ. ಇದು ನಿನ್ನೆಯ ಗುಜರಾತ್ ಕೋರ್ಟ್ ತೀರ್ಪಿನಿಂದ ಸಾಬೀತಾಗಿದೆ'' ಎಂದು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಹೇಳಿದ್ದಾರೆ.

ದೇಶದಲ್ಲಿ ವಿರೋಧ ಪಕ್ಷಗಳನ್ನು ಮುಗಿಸಲು ಭಾರತೀಯ ಜನತಾ ಪಕ್ಷ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪವಾರ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com