ಕೋವಿಡ್-19: ಭಾರತದಲ್ಲಿಂದು 12,183 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 67,556ಕ್ಕೆ ಏರಿಕೆ

ಭಾರತದಲ್ಲಿ ಶನಿವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆ ಅವಧಿಯಲ್ಲಿ 12,183 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು 32 ಮಂದಿ ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಶನಿವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆ ಅವಧಿಯಲ್ಲಿ 12,183 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು 32 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,48,81,877ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,300ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 67,556ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,42,83,021ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,97,477 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,52,74,799 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 2,20,66,37,581 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com