ಮಗಳು, ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು!
ಅಪ್ರಾಪ್ತ ಮಗಳು ಮತ್ತು ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Published: 22nd April 2023 03:57 PM | Last Updated: 22nd April 2023 03:57 PM | A+A A-

ಸಾಂದರ್ಭಿಕ ಚಿತ್ರ
ಸಹರಾನ್ಪುರ: ಅಪ್ರಾಪ್ತ ಮಗಳು ಮತ್ತು ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಗಲ್ಹೆಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಮಾಜಿ ಮುಖ್ಯಸ್ಥನನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ ಎಂದು ಎಸ್‌ಪಿ ಸಿಟಿ ಅಭಿಮನ್ಯು ಮಾಂಗ್ಲಿಕ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿಯು ತನ್ನ ದೂರಿನಲ್ಲಿ ತನ್ನ ತಂದೆ ತನ್ನನ್ನು ಮತ್ತು ಸಬಾಲ್ ಜಿಲ್ಲೆಯ ತನ್ನ ಸ್ನೇಹಿತೆಯನ್ನು ಅತ್ಯಾಚಾರ ಮಾಡುತ್ತಿದ್ದ ಎಂದು ಆರೋಪಿಸಿದ್ದಾಳೆ.
ಇದನ್ನೂ ಓದಿ: ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು!
ಸಾಮಾಜಿಕ ಒತ್ತಡದಿಂದಾಗಿ ನಾವು ಮೌನವಾಗಿದ್ದೆವು. ಆದರೆ, ನಂತರ ಪೊಲೀಸರಿಗೆ ದೂರು ನೀಡಿದೆವು ಎಂದು ಅವರು ಹೇಳಿದರು.
ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂತ್ರಸ್ತರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಪಿ ಮಾಂಗ್ಲಿಕ್ ತಿಳಿಸಿದ್ದಾರೆ.