ಬಾಕಿ ಇರುವ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ: ಹೈಕೋರ್ಟ್ ನ್ಯಾಯಾಧೀಶರಿಗೆ ಸಿಜೆಐ ತರಾಟೆ
ಹೈಕೋರ್ಟ್ ನ್ಯಾಯಾಧೀಶರೊಬ್ಬರು ಬಾಕಿ ಇರುವ ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ ಗರಂ ಆಗಿದ್ದಾರೆ.
Published: 24th April 2023 07:12 PM | Last Updated: 24th April 2023 08:11 PM | A+A A-

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್
ನವದೆಹಲಿ: ಹೈಕೋರ್ಟ್ ನ್ಯಾಯಾಧೀಶರೊಬ್ಬರು ಬಾಕಿ ಇರುವ ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ ಗರಂ ಆಗಿದ್ದಾರೆ.
ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಅವರು ಬಾಕಿ ಇರುವ ಪ್ರಕರಣವೊಂದರ ಬಗ್ಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು.
ಬಾಕಿ ಇರುವ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರು ಸಂದರ್ಶನ ನೀಡಬೇಕಿಲ್ಲ. ಅದು ನಿಜವಾದರೆ, ಈ ಪ್ರಕರಣವನ್ನು ಅವರು ವಿಚಾರಣೆ ನಡೆಸಬೇಕಿಲ್ಲ. ಅವರು ಈ ರೀತಿ ಮಾಡಿದ್ದರೆ, ವಿಚಾರಣೆಯಲ್ಲಿ ಭಾಗವಹಿಸಬೇಕಿಲ್ಲ.
ಬಾಕಿ ಉಳಿದಿರುವ ವಿಷಯಗಳ ಕುರಿತು ಸುದ್ದಿ ವಾಹಿನಿಗಳಿಗೆ ಸಂದರ್ಶನ ನೀಡುವುದು ನ್ಯಾಯಾಧೀಶರ ಕೆಲಸವಲ್ಲ. ಇದು ನಿಜವಾಗಿದ್ದರೆ, ಅವರು ಇನ್ನು ಮುಂದೆ ಈ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ. ನಾವು ತನಿಖೆಯನ್ನು ಮಾಡುವುದಿಲ್ಲ. ಆದರೆ ಟಿವಿ ಚರ್ಚೆಯಲ್ಲಿ ಅರ್ಜಿದಾರರ ಬಗ್ಗೆ ನ್ಯಾಯಾಧೀಶರು ಅಭಿಪ್ರಾಯವನ್ನು ನೀಡಿದರೆ, ಅವರು ಆ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ. ನಂತರ ಹೈಕೋರ್ಟ್ ಮುಖ್ಯಸ್ಥರು ಹೊಸ ಪೀಠವನ್ನು ರಚಿಸಬೇಕು ಎಂದು ಸಿಜೆಐ ಹೇಳಿದ್ದಾರೆ.
ಇದನ್ನೂ ಓದಿ: ನ್ಯಾಯಾಂಗ ವ್ಯವಸ್ಥೆ ಸುಧಾರಣೆ: ಕೊಟ್ಟ ಭರವಸೆ ಉಳಿಸಿಕೊಂಡ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಚಂದ್ರಚೂಡ್!
ಕೋಲ್ಕತ್ತಾ ಹೈಕೋರ್ಟ್ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧದ ನೇಮಕಾತಿ ಹಗರಣದಲ್ಲಿ ಅವರ ಪಾತ್ರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಬಿಐ ಗೆ ನಿರ್ದೇಶಿಸುವುದರ ಪ್ರಕರಣದ ಬಗ್ಗೆ ಕೋರ್ಟ್ ಈಗ ಹೆಚ್ಚಿನ ಮಹತ್ವ ನೀಡುವುದಿಲ್ಲ. ಆದರೆ ಹೈಕೋರ್ಟ್ ನ್ಯಾಯಾಧೀಶರು ಸಂದರ್ಶನ ನೀಡಿದ್ದಾರೆಯೇ ಇಲ್ಲವೇ ಎಂಬುದನ್ನು ತಿಳಿಯುವುದು ಅಗತ್ಯವಾಗಿದೆ ಎಂದು ಚಂದ್ರಚೂಡ್ ಹೇಳಿದ್ದಾರೆ.
ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತಮ್ಮನ್ನು ವಿಚಾರಣೆ ನಡೆಸಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿರುವ ಕೋಲ್ಕತ್ತ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಟಿಎಂ ಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ವೇಳೆ ಸಿಜೆಐ ಈ ಮಾತುಗಳನ್ನಾಡಿದ್ದಾರೆ.