ಪ್ರಧಾನಿ ಮೋದಿ ವಿರುದ್ಧ ಮಾತನಾಡುವುದು ನಿಲ್ಲಿಸಿ, ಇಲ್ಲದೇ ಇದ್ದಲ್ಲಿ...: ಉದ್ಧವ್ ಗೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಎಚ್ಚರಿಕೆ!

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣ (ಯುಬಿಟಿ) ದ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಎಚ್ಚರಿಕೆ ನೀಡಿದ್ದಾರೆ.
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣ (ಯುಬಿಟಿ) ದ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದ ಜಲ್ಗಾಂವ್ ನಲ್ಲಿ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಉದ್ಧವ್ ಠಾಕ್ರೆ, ಪುಲ್ವಾಮ ದಾಳಿಗೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲೀಕ್ ಅವರು ಬಹಿರಂಗಪಡಿಸಿದ್ದ ಅಂಶಗಳ ಆಧಾರದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. 

"ಕೇಂದ್ರ ಸಚಿವ ಅಮಿತ್ ಶಾ ಅವರು, ಇತ್ತೀಚೆಗೆ ಮಲಿಕ್ ಅವರು ರಾಜ್ಯಪಾಲರಾಗಿದ್ದಾಗ ಏಕೆ ಮಾತನಾಡಲಿಲ್ಲ ಎಂದು ಆಶ್ಚರ್ಯ ಪಡುತ್ತಿದ್ದರು. ಆದರೆ ಮಲಿಕ್ ಅವರು ಈಗಾಗಲೇ ಪ್ರಧಾನಿಯವರು ಮೌನವಾಗಿರಲು ಸೂಚಿಸಿದ್ದನ್ನು ಬಹಿರಂಗಪಡಿಸಿದ್ದರು" ಎಂದು ರ್ಯಾಲಿಯಲ್ಲಿ ಠಾಕ್ರೆ ಹೇಳಿದ್ದರು.

ಉದ್ಧವ್ ಠಾಕ್ರೆ ಅವರು ಪ್ರಧಾನಿ ಮೋದಿ ವಿರುದ್ಧ ಮಾತನಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಇಲ್ಲದೇ ಇದ್ದಲ್ಲಿ, ಬಿಜೆಪಿ ಕಾರ್ಯಕರ್ತರನ್ನು ಉದ್ವಿಗ್ನಗೊಳಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ. 2024 ರಲ್ಲಿ ಪ್ರಧಾನಿ ಮೋದಿ ಅವರು ಗೆದ್ದರೆ, ಉದ್ಧವ್ ಠಾಕ್ರೆ ಅವರ ಪಕ್ಷದ ಚಿಹ್ನೆಯಾಗಿರುವ ಉರಿಯುವ ಟಾರ್ಚ್ ಆರಿ ಹೋಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com