ವಿಮಾನದಲ್ಲಿ ಮತ್ತೊಂದು ಮೂತ್ರ ವಿಸರ್ಜನೆ ಪ್ರಕರಣ: ಭಾರತ ಮೂಲದ ವ್ಯಕ್ತಿ ಬಂಧನ

ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಅಮೆರಿಕನ್ ಏರ್ ಲೈನ್ ವಿಮಾನದಲ್ಲಿ ಭಾರತ ಮೂಲದ ಇಬ್ಬರು ವ್ಯಕ್ತಿಗಳು ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಅಮೆರಿಕನ್ ಏರ್ ಲೈನ್ ವಿಮಾನದಲ್ಲಿ ಭಾರತ ಮೂಲದ ಇಬ್ಬರು ವ್ಯಕ್ತಿಗಳು ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ನ್ಯೂಯಾರ್ಕ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಭಾರತೀಯ ವ್ಯಕ್ತಿಗಳು ತಮ್ಮ ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಏರ್‌ಲೈನ್ಸ್ ಸಿಬ್ಬಂದಿಗಳು ಹೇಳಿರುವಂತೆ ಆರೋಪಿ ಭಾರತೀಯ ಪ್ರಯಾಣಿಕ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಘಟನೆಯು ಅಮೇರಿಕನ್ ಏರ್‌ಲೈನ್ಸ್ ಫ್ಲೈಟ್ ಎಎ 292 ನಲ್ಲಿ ನಡೆದಿದ್ದು, ವಿಮಾನವು ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ "ಅಶಿಸ್ತಿನ" ಪ್ರಯಾಣಿಕರನ್ನು ಬಂಧಿಸಿದ್ದಾರೆ.

ವಿಮಾನ ಇಳಿಯುವ ಮೊದಲು ದೆಹಲಿ ವಿಮಾನ ನಿಲ್ದಾಣಕ್ಕೆ ಈ ವಿಷಯವನ್ನು ತಿಳಿಸಿದೆವು ಮತ್ತು ಆರೋಪಿಗಳಾದ ಇಬ್ಬರೂ ಪ್ರಯಾಣಿಕರನ್ನು ನಂತರ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಯಿತು. ಸಂತ್ರಸ್ತ ಪ್ರಯಾಣಿಕರು ಔಪಚಾರಿಕ ದೂರು ದಾಖಲಿಸಿದ್ದಾರೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ಪ್ರಯಾಣಿಕರು ಮದ್ಯ ಸೇವಿಸಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆಗಳು ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಿವೆ. ಆಘಾತಕಾರಿ ಘಟನೆಯೊಂದರಲ್ಲಿ, ಕಳೆದ ವರ್ಷ ನವೆಂಬರ್ 26 ರಂದು ಏರ್ ಇಂಡಿಯಾ ನ್ಯೂಯಾರ್ಕ್-ದೆಹಲಿ ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಎಪ್ಪತ್ತರ ಹರೆಯದ ಮಹಿಳೆ ಮೇಲೆ ಸಹ-ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ್ದ. ಈ ಪ್ರಕರಣ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com