ಲಖಿಂಪುರ ಖೇರಿ ಹಿಂಸಾಚಾರ: ಆಶಿಶ್ ಮಿಶ್ರಾಗೆ ಜುಲೈ 11ರವರೆಗೆ ಮಧ್ಯಂತರ ಜಾಮೀನು ವಿಸ್ತರಣೆ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಜುಲೈ 11 ರವರೆಗೆ ವಿಸ್ತರಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಜುಲೈ 11 ರವರೆಗೆ ವಿಸ್ತರಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆಕೆ ಮಹೇಶ್ವರಿ ಅವರನ್ನೊಳಗೊಂಡ ಪೀಠವು ವಿಚಾರಣೆಯನ್ನು ಮುಂದೂಡುತ್ತಾ, ಈ ವಿಷಯಕ್ಕೆ ಸಂಬಂಧಿಸಿದ ಮಧ್ಯಂತರ ಜಾಮೀನನ್ನು ಜುಲೈ 11 ರವರೆಗೆ ಮುಂದುವರಿಸಲಾಗುವುದು ಎಂದು ಹೇಳಿದೆ.

ಈ ಪ್ರಕರಣದಲ್ಲಿ ಸಂತ್ರಸ್ತರ ಕುಟುಂಬದ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ವಿಚಾರಣಾ ನ್ಯಾಯಾಲಯದಲ್ಲಿ ದೈನಂದಿನ ವಿಚಾರಣೆಗಳನ್ನು ನಡೆಸಲು ನಿರ್ದೇಶಿಸುವಂತೆ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದರು.

ವಿಚಾರಣಾ ನ್ಯಾಯಾಲಯವು ಇಂತಹ ಹಲವಾರು ಪ್ರಕರಣಗಳ ವಿಚಾರಣೆ ಕೈಗೊಂಡಿರುವುದರಿಂದ ದಿನನಿತ್ಯ ವಿಚಾರಣೆ ನಡೆಸುವುದು ಸಾಧ್ಯವಾಗದಿರಬಹುದು ಎಂದು ನ್ಯಾಯಾಲಯ ಹೇಳಿದೆ.

ಆದರೆ, ಇಂತಹ ಪ್ರಕರಣಗಳು ಇಪ್ಪತ್ತು ವರ್ಷಗಳವರೆಗೆ ನಡೆಯುತ್ತವೆ ಮತ್ತು ಅಲ್ಲಿಯವರೆಗೆ ಪ್ರಕರಣಕ್ಕೆ ಸಂಬಂಧಿಸಿದ ಅನೇಕ ಸಾಕ್ಷಿಗಳು ಮೃತಪಟ್ಟಿರುತ್ತಾರೆ ಎಂದು ಪ್ರಶಾಂತ್ ಭೂಷಣ್ ಹೇಳಿದರು. ಈ ಕಾರಣಕ್ಕಾಗಿಯೇ ಪ್ರಕರಣವನ್ನು ಬಾಕಿ ಇರಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಜನವರಿ 25 ರಂದು ಸುಪ್ರೀಂ ಕೋರ್ಟ್ ಆಶಿಶ್ ಮಿಶ್ರಾಗೆ ಎಂಟು ವಾರಗಳ ಮಧ್ಯಂತರ ಜಾಮೀನು ನೀಡಿತು ಮತ್ತು ವಿವಿಧ ಷರತ್ತುಗಳನ್ನು ವಿಧಿಸಿತು.

ಎಂಟು ವಾರಗಳ ಮಧ್ಯಂತರ ಜಾಮೀನಿನ ಅವಧಿಯಲ್ಲಿ ಅವರು ಉತ್ತರ ಪ್ರದೇಶದಲ್ಲಿ ಅಥವಾ ದೆಹಲಿಯ ಎನ್‌ಸಿಟಿಯಲ್ಲಿ ಇರಬಾರದು ಎಂದು ಸುಪ್ರೀಂ ಕೋರ್ಟ್ ಆಶಿಶ್ ಮಿಶ್ರಾಗೆ ನಿರ್ದೇಶನ ನೀಡಿದೆ. ಆಶಿಶ್ ಮಿಶ್ರಾ ಅವರು ತಂಗುವ ಸ್ಥಳದ ಬಗ್ಗೆ ಸಂಬಂಧಪಟ್ಟ ನ್ಯಾಯಾಲಯಕ್ಕೆ ತಿಳಿಸುವಂತೆಯೂ ಸುಪ್ರೀಂ ಕೋರ್ಟ್ ಸೂಚಿಸಿದೆ.

ಆಶಿಶ್ ಮಿಶ್ರಾ ಅಥವಾ ಅವರ ಕುಟುಂಬದವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ವಿಚಾರಣೆಯನ್ನು ವಿಳಂಬಗೊಳಿಸಲು ಪ್ರಯತ್ನಿಸಿದರೆ, ಅದು ಅವರ ಜಾಮೀನು ರದ್ದತಿಗೆ ಕಾರಣವಾಗಬಹುದು. ಮಿಶ್ರಾ ಅವರಿರುವ ಸ್ಥಳಕ್ಕೆ ಸಂಬಂಧಿಸಿದ ಪೊಲೀಸ್ ಠಾಣೆಗೆ ಅವರು ದಿನನಿತ್ಯ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. 

ನ್ಯಾಯಾಲಯವು ತನ್ನ ಸ್ವಯಂ ಪ್ರೇರಿತ ಅಧಿಕಾರವನ್ನು ಬಳಸಿಕೊಂಡು ಪ್ರಕರಣದ ಇತರ ನಾಲ್ವರು ಸಹ ಆರೋಪಿಗಳಿಗೆ ಸಹ ಮಧ್ಯಂತರ ಜಾಮೀನು ನೀಡಿದೆ.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

2022ರ ಜುಲೈ 26ರಂದು ಅಲಹಾಬಾದ್ ಹೈಕೋರ್ಟ್ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com