ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್

ಲಾಲು ಪ್ರಸಾದ್ ಮಗನಾಗಿರದಿದ್ದರೆ ತೇಜಸ್ವಿಯೇ ನಿರುದ್ಯೋಗಿ: 10 ಲಕ್ಷ ಉದ್ಯೋಗದ ಭರವಸೆ ಕುರಿತು ಪ್ರಶಾಂತ್ ಕಿಶೋರ್ ವ್ಯಂಗ್ಯ

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. 10 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ತೇಜಸ್ವಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಮಗನಾಗಿರದಿದ್ದರೆ ಅವರಿಗೇ ಕೆಲಸ ಸಿಗುತ್ತಿರಲಿಲ್ಲ ಎಂದು ಲೇವಡಿ ಮಾಡಿದ್ದಾರೆ. 

ಪಾಟ್ನಾ: ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. 10 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ತೇಜಸ್ವಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಮಗನಾಗಿರದಿದ್ದರೆ ಅವರಿಗೇ ಕೆಲಸ ಸಿಗುತ್ತಿರಲಿಲ್ಲ ಎಂದು ಲೇವಡಿ ಮಾಡಿದ್ದಾರೆ. 

ಜನ್ ಸೂರಜ್ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಕಿಶೋರ್, ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ 10 ಲಕ್ಷ ಉದ್ಯೋಗ ನೀಡುವ ಬಗ್ಗೆ ತೇಜಸ್ವಿ ಯಾದವ್ ಮಾತನಾಡಿದ್ದಾರೆ. ಅವರು 10 ಲಕ್ಷ ಉದ್ಯೋಗ ನೀಡಲು ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಲಾಲ್ ಪ್ರಸಾದ್ ಯಾದವ್ ಅವರ ಮಗನಾಗದಿದ್ದರೆ ಅವರಿಗೆ ಕೆಲಸ ಪಡೆಯಲು ಆಗುತ್ತಿರಲಿಲ್ಲ. ಹಾಗಾದರೆ ಬೇರೆಯವರೆಗೆ ಹೇಗೆ ಅವರು ಉದ್ಯೋಗ ನೀಡಬಹುದು? ಅವರಿಗೆ ದೇಶದಲ್ಲಿ ಯಾವ ಕೆಲಸ ಸಿಗುತ್ತಿತ್ತು? ಎಂದು ಪ್ರಶ್ನಿಸಿದರು. ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿರುವುದಕ್ಕೆ ತೇಜಸ್ವಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು. 

2024 ರ ಚುನಾವಣೆಗಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ಹಲವಾರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುತ್ತಿರುವಂತೆಯೇ 2019 ರ ಚುನಾವಣೆಯಲ್ಲಿ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಯತ್ನದ ಬಗ್ಗೆ ಪ್ರಶಾಂತ್ ಕಿಶೋರ್ ಮಾತನಾಡಿದ್ದಾರೆ. 

"ನಿತೀಶ್ ಕುಮಾರ್' ಕುಂಟು ಸರ್ಕಾರ' ಹೊಂದಿದ್ದು ಬಿಹಾರದ ಬಗ್ಗೆ ಅವರು ಚಿಂತಿಸಬೇಕು. 'ಶೂನ್ಯ' ಸಂಸದರನ್ನು ಹೊಂದಿರುವ ಪಕ್ಷವು ದೇಶದ ಪ್ರಧಾನಿಯನ್ನು ನಿರ್ಧರಿಸುತ್ತಿದೆ. ಅವರ ಪಕ್ಷಕ್ಕೆ ಯಾವುದೇ ಹಿಡಿತವಿಲ್ಲ ಮತ್ತು ಈಗ ಅವರು ಇತರ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಶೋರ್ ಹೇಳಿದರು. .

2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟು ಸಾಧಿಸುವ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೋಮವಾರ ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದರು. 

Related Stories

No stories found.

Advertisement

X
Kannada Prabha
www.kannadaprabha.com