ಅಧಿಕಾರ ತ್ಯಜಿಸಿದ ನಂತರ ಪುಲ್ವಾಮಾ ದಾಳಿ ಪ್ರಶ್ನಿಸುತ್ತಿಲ್ಲ, ಅಂದೇ ಹೇಳಿದ್ದೆ: ಸತ್ಯಪಾಲ್ ಮಲಿಕ್

ಅಧಿಕಾರ ತ್ಯಜಿಸಿದ ನಂತರ 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ ಎಂದು ಹೇಳುವುದು ಸರಿಯಲ್ಲ. ನಾನು ಅಂದೇ ಈ ಬಗ್ಗೆ ಪ್ರಶ್ನಿಸಿದ್ದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್...
ಸತ್ಯಪಾಲ್ ಮಲಿಕ್
ಸತ್ಯಪಾಲ್ ಮಲಿಕ್

ಜೈಪುರ: ಅಧಿಕಾರ ತ್ಯಜಿಸಿದ ನಂತರ 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ ಎಂದು ಹೇಳುವುದು ಸರಿಯಲ್ಲ. ನಾನು ಅಂದೇ ಈ ಬಗ್ಗೆ ಪ್ರಶ್ನಿಸಿದ್ದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಹೇಳಿದ್ದಾರೆ.

"ನಮ್ಮಿಂದ ಬೇರ್ಪಟ್ಟ ನಂತರ ಆರೋಪಗಳನ್ನು ಮಾಡುತ್ತಿದ್ದಾರೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಹೇಳಿಕೆಯ ಕುರಿತು ಪ್ರಶ್ನೆಗೆ ಮಲಿಕ್ ಅವರು ಈ ರೀತಿ ಉತ್ತರಿಸಿದ್ದಾರೆ.

ರಾಜಸ್ಥಾನದ ಸಿಕಾರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಅಧಿಕಾರದಿಂದ ಕೆಳಗಿಳಿದ ನಂತರ ಈ ವಿಷಯವನ್ನು ಪ್ರಸ್ತಾಪಿಸಿದೆ ಎಂದು ಹೇಳುವುದು ತಪ್ಪು. ಉಗ್ರ ದಾಳಿಯ ದಿನದಂದೇ ನಾನು ಅದನ್ನು ಪ್ರಸ್ತಾಪಿಸಿದೆ ಎಂದಿದ್ದಾರೆ.

ಫೆಬ್ರವರಿ 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ವಾಹನಗಳ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು.

ಅಂದು ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದ ಮಲಿಕ್ ಅವರು, ಇತ್ತೀಚೆಗೆ ಪುಲ್ವಾಮಾ ದಾಳಿಗೆ ಗುಪ್ತಚರ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದರು ಮತ್ತು ಭದ್ರತಾ ಸಿಬ್ಬಂದಿಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ವಿಮಾನವನ್ನು ನಿರಾಕರಿಸಿತ್ತು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com