ಕಾಂಗ್ರೆಸ್ ದೇಶದ ಕ್ಷಮೆ ಯಾಚಿಸಬೇಕು: ಮಲ್ಲಿಕಾರ್ಜುನ ಖರ್ಗೆ 'ವಿಷಕಾರಿ ಹಾವು' ಹೇಳಿಕೆಗೆ ಅನುರಾಗ್ ಠಾಕೂರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಅನುರಾಗ್ ಠಾಕೂರ್, ಖರ್ಗೆ ಅವರನ್ನು ಯಾರೊಬ್ಬರೂ ತಮ್ಮ ಪಕ್ಷದ ಮುಖ್ಯಸ್ಥ ಎಂದು ಒಪ್ಪಿಕೊಳ್ಳದ ಕಾರಣ ಈ ಹೇಳಿಕೆ ನೀಡಿದ್ದಾರೆ ಎಂದು ಗುರುವಾರ ಹೇಳಿದ್ದಾರೆ.
ಅನುರಾಗ್ ಠಾಕೂರ್
ಅನುರಾಗ್ ಠಾಕೂರ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಅನುರಾಗ್ ಠಾಕೂರ್, ಖರ್ಗೆ ಅವರನ್ನು ಯಾರೊಬ್ಬರೂ ತಮ್ಮ ಪಕ್ಷದ ಮುಖ್ಯಸ್ಥ ಎಂದು ಒಪ್ಪಿಕೊಳ್ಳದ ಕಾರಣ ಈ ಹೇಳಿಕೆ ನೀಡಿದ್ದಾರೆ ಎಂದು ಗುರುವಾರ ಹೇಳಿದ್ದಾರೆ.

ಖರ್ಗೆಯವರ ಹೇಳಿಕೆಗೆ ಕಾಂಗ್ರೆಸ್ ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದೆ. ಆದರೆ, ಯಾರೂ ಅವರನ್ನು ಪರಿಗಣಿಸುತ್ತಿಲ್ಲ. ಆದ್ದರಿಂದ ಅವರು ಸೋನಿಯಾ ಗಾಂಧಿ ನೀಡಿದ್ದಕ್ಕಿಂತ ಕೆಟ್ಟ ಹೇಳಿಕೆ ನೀಡಲು ಯೋಚಿಸಿದ್ದಾರೆ. ಕಾಂಗ್ರೆಸ್ ದೇಶದ ಕ್ಷಮೆ ಯಾಚಿಸಬೇಕು ಎಂದು ಠಾಕೂರ್ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಮತ್ತು ಕೇಂದ್ರ ಸಚಿವೆ ಶೋಬಾ ಕರಂದ್ಲಾಜೆ ಅವರು ಖರ್ಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನ ಹಿರಿಯ ನಾಯಕರು ಮತ್ತು ಪಕ್ಷದ ಅಧ್ಯಕ್ಷರು. ಅವರು ಜಗತ್ತಿಗೆ ಏನು ಹೇಳಲು ಬಯಸುತ್ತಿದ್ದಾರೆ?. ನರೇಂದ್ರ ಮೋದಿ ಅವರು ನಮ್ಮ ದೇಶದ ಪ್ರಧಾನಿಯಾಗಿದ್ದು, ಇಡೀ ವಿಶ್ವವೇ ಅವರನ್ನು ಗೌರವಿಸುತ್ತದೆ. ಪ್ರಾಧಾನಿಗೆ ಇಂತಹ ಭಾಷೆಯನ್ನು ಬಳಸುತ್ತಿರುವುದು ಕಾಂಗ್ರೆಸ್ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದನ್ನು ತೋರಿಸುತ್ತದೆ. ಅವರು (ಖರ್ಗೆ) ದೇಶದ ಕ್ಷಮೆ ಯಾಚಿಸಬೇಕು ಎಂದು ನಾವು ಬಯಸುತ್ತೇವೆ ಎಂದು ಕರಂದ್ಲಾಜೆ ಹೇಳಿದರು.

ಕಲಬುರಗಿಯಲ್ಲಿ ಗುರುವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, 'ಪ್ರಧಾನಿ ಮೋದಿ ವಿಷಪೂರಿತ ಹಾವಿನಂತೆ, ಇದು ವಿಷವೋ ಅಲ್ಲವೋ ಎಂದು ಭಾವಿಸಿ ನೀವು ಅದನ್ನು ನೆಕ್ಕಿದರೆ ಸತ್ತಂತೆ' ಎಂದು ಹೇಳಿದ್ದರು.

ಆದರೆ, ವಿವಾದದ ಕಿಡಿ ಹೊತ್ತಿಕೊಳ್ಳುತ್ತಿದ್ದಂತೆ, ಖರ್ಗೆ ಅವರು, ನನ್ನ ಹೇಳಿಕೆ ಬಿಜೆಪಿಗಾಗಿಯೇ ಹೊರತು ಪ್ರಧಾನಿ ಮೋದಿ ಅವರನ್ನು ಕುರಿತು ಹೇಳಿದ್ದಲ್ಲ ಎಂದಿದ್ದಾರೆ. 

ಇದು ಪ್ರಧಾನಿ ಮೋದಿಯವರನ್ನು ಉದ್ದೇಶಿಸಿರಲಿಲ್ಲ. ನನ್ನ ಪ್ರಕಾರ, ಬಿಜೆಪಿಯ ಸಿದ್ಧಾಂತ 'ಹಾವಿನಂತೆ'. ನಾನು ಪ್ರಧಾನಿ ಮೋದಿಯವರಿಗಾಗಿ ಇದನ್ನು ವೈಯಕ್ತಿಕವಾಗಿ ಹೇಳಿಲ್ಲ. ಬಿಜೆಪಿ ಸಿದ್ಧಾಂತ ಹಾವಿನಂತಿದೆ ಮತ್ತು ಅದನ್ನು ಮುಟ್ಟಲು ಪ್ರಯತ್ನಿಸಿದರೆ ನಿಮ್ಮ ಸಾವು ಖಚಿತ ಎಂದು ಹೇಳಿದ್ದೆ ಎಂದು ಖರ್ಗೆ ಹೇಳಿದರು.

ಕರ್ನಾಟಕದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ ಏರ್ಪಟ್ಟಿದೆ. 224 ಸ್ಥಾನಗಳ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com