ಕೋವಿಡ್ 19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 9,355 ಹೊಸ ಪ್ರಕರಣಗಳು ದಾಖಲು; ಸಕ್ರಿಯ ಪ್ರಕರಣಗಳ ಸಂಖ್ಯೆ 57,410

ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತವು 9,355 ಹೊಸ ಕೊರೋನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಇಳಿಕೆಯನ್ನು ಕಂಡಿದೆ. ಸಕ್ರಿಯ ಪ್ರಕರಣಗಳು 61,013 ರಿಂದ 57,410 ಕ್ಕೆ ಇಳಿದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತವು 9,355 ಹೊಸ ಕೊರೋನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಇಳಿಕೆಯನ್ನು ಕಂಡಿದೆ. ಸಕ್ರಿಯ ಪ್ರಕರಣಗಳು 61,013 ರಿಂದ 57,410 ಕ್ಕೆ ಇಳಿದಿದೆ.

ದೇಶದಲ್ಲಿ ಇದುವರೆಗೆ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,31,424 ಕ್ಕೆ ಏರಿಕೆಯಾಗಿದ್ದು, 26 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ದೈನಂದಿನ ಪಾಸಿಟಿವ್ ದರವು ಶೇಕಡಾ 5.38 ಆಗಿದ್ದು, ಸಾಪ್ತಾಹಿಕ ಪಾಸಿಟಿವ್ ದರವು ಶೇಕಡಾ 5.61 ಆಗಿದೆ. 

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 4.49 ಕೋಟಿ ದಾಖಲಾಗಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳಲ್ಲಿ 0.13 ಪ್ರತಿಶತವನ್ನು ಒಳಗೊಂಡಿವೆ, ಕೋವಿಡ್ ಚೇತರಿಕೆ ದರವು ಶೇಕಡಾ 98.69ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 44,335, 977 ಕ್ಕೆ ಏರಿದೆ ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.18 ರಷ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ದೆಹಲಿಯಲ್ಲಿ ನಿನ್ನೆ ಬುಧವಾರ ಕೋವಿಡ್ -19 ನಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಒಟ್ಟು 1,040 ಹೊಸ ಪ್ರಕರಣಗಳನ್ನು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 4,915 ಮಾದರಿಗಳನ್ನು ಕೋವಿಡ್‌ಗಾಗಿ ಪರೀಕ್ಷಿಸಲಾಗಿದ್ದು, 1,320 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com