ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಇಂದು ಎಫ್‌ಐಆರ್ ದಾಖಲಿಸುತ್ತೇವೆ: ಸುಪ್ರೀಂ ಕೋರ್ಟ್ ಗೆ ದೆಹಲಿ ಪೊಲೀಸರು!

ಭಾರತೀಯ ರೆಸ್ಲಿಂಗ್ ಫೆಡರೇಶನ್(ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ನೀಡಿರುವ ಲೈಂಗಿಕ ಕಿರುಕುಳ ಆರೋಪದ ಸಂಬಂಧ ಇಂದು ಎಫ್‌ಐಆರ್ ದಾಖಲಿಸಲು ನಿರ್ಧರಿಸಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.
ಭಾರತೀಯ ಕುಸ್ತಿಪಟುಗಳು
ಭಾರತೀಯ ಕುಸ್ತಿಪಟುಗಳು

ನವದೆಹಲಿ: ಭಾರತೀಯ ರೆಸ್ಲಿಂಗ್ ಫೆಡರೇಶನ್(ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ನೀಡಿರುವ ಲೈಂಗಿಕ ಕಿರುಕುಳ ಆರೋಪದ ಸಂಬಂಧ ಇಂದು ಎಫ್‌ಐಆರ್ ದಾಖಲಿಸಲು ನಿರ್ಧರಿಸಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಈ ವೇಳೆ ಮಹಿಳಾ ಕುಸ್ತಿಪಟುಗಳಿಗೆ ಭದ್ರತೆ ಒದಗಿಸುವಂತೆಯೂ ಮುಖ್ಯ ನ್ಯಾಯಮೂರ್ತಿ ಪೊಲೀಸರಿಗೆ ಸೂಚಿಸಿದ್ದಾರೆ. 

ಕಳೆದ ಹಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲು ತಮ್ಮ ಮನವಿಯ ತುರ್ತು ವಿಚಾರಣೆಗಾಗಿ ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕುಸ್ತಿಪಟುಗಳ ಕೋರಿಕೆಯ ಮೇರೆಗೆ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು. ಈ ವೇಳೆ ಆರೋಪದ ಮೇಲೆ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿತ್ತು. 

ಕುಸ್ತಿಪಟುಗಳ ದೂರಿನ ಮೇರೆಗೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ಧರಿಸಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಇಂದು ಎಫ್‌ಐಆರ್ ದಾಖಲಿಸಲಾಗುವುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಇನ್ನು ಲೈಂಗಿಕ ದುರ್ನಡತೆಯ ಆರೋಪಗಳನ್ನು ನಿರಾಕರಿಸಿರುವ ಬ್ರಿಜ್ ಭೂಷಣ್ ಸಿಂಗ್, ತಾನು ನಿರಪರಾಧಿ ಎಂದು ಸಾಬೀತುಪಡಿಸಲು ಕಠಿಣ ಹೋರಾಟ ನಡೆಸುವುದಾಗಿ ಗುರುವಾರ ವೀಡಿಯೊವನ್ನು ಬಿಡುಗಡೆ ಮಾಡಿದ್ದು, ತಾನು ಅಸಹಾಯಕತೆಯನ್ನು ಅನುಭವಿಸುವ ದಿನ ಸಾಯಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com