ಸಿಇಪಿಟಿ ವಿದ್ಯಾರ್ಥಿ ಆತ್ಮಹತ್ಯೆ; ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 3000 ವಿದ್ಯಾರ್ಥಿಗಳು ಸಾವಿಗೆ ಶರಣು

ಅಹಮದಾಬಾದ್‌ನ ಸೆಂಟರ್ ಫಾರ್ ಎನ್ವಿರಾನ್ಮೆಂಟಲ್ ಪ್ಲಾನಿಂಗ್ ಅಂಡ್ ಟೆಕ್ನಾಲಜಿ(ಸಿಇಪಿಟಿ)ಯ 23 ವರ್ಷದ ವಿದ್ಯಾರ್ಥಿಯೊಬ್ಬರು ಓದಿನ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಹಮದಾಬಾದ್: ಅಹಮದಾಬಾದ್‌ನ ಸೆಂಟರ್ ಫಾರ್ ಎನ್ವಿರಾನ್ಮೆಂಟಲ್ ಪ್ಲಾನಿಂಗ್ ಅಂಡ್ ಟೆಕ್ನಾಲಜಿ(ಸಿಇಪಿಟಿ)ಯ 23 ವರ್ಷದ ವಿದ್ಯಾರ್ಥಿಯೊಬ್ಬರು ಓದಿನ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುಜರಾತ್ ನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಇದೇ ಮೊದಲಲ್ಲ. ಎನ್‌ಸಿಆರ್‌ಬಿಯ ವರದಿಯ ಪ್ರಕಾರ, ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 3,002 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಂಕಿಅಂಶಗಳ ಪ್ರಕಾರ, 2022 ರಲ್ಲಿ ಏಳು ವೈದ್ಯಕೀಯ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದು, ಇದು ಗುಜರಾತ್ ನಲ್ಲಿರುವ ಭೀಕರ ಸನ್ನಿವೇಶವನ್ನು ಸೂಚಿಸುತ್ತದೆ.

2020, 2021 ಮತ್ತು 2023 ರಲ್ಲಿ ಗುಜರಾತ್‌ನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುಜರಾತ್‌ನ ಮತ್ತೊಬ್ಬ ವಿದ್ಯಾರ್ಥಿ ದರ್ಶನ್ ಸೋಲಂಕಿ ಇತ್ತೀಚೆಗೆ ಐಐಟಿ-ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿಇಪಿಟಿ ವಿಶ್ವವಿದ್ಯಾಲಯದಲ್ಲಿ ಅಂತಿಮ ಸೆಮಿಸ್ಟರ್ ಆರ್ಕಿಟೆಕ್ಚರ್ ವಿದ್ಯಾರ್ಥಿಯಾಗಿರುವ ಶಿವ ಮಹೇಂದ್ರಭಾಯಿ ಮಿಸ್ತ್ರಿ(23), ವಡೋದರಾ ಮೂಲದವರಾಗಿದ್ದು. ಪಿಜಿಯಲ್ಲಿ ಉಳಿದುಕೊಂಡಿದ್ದರು.

ಶಿವ ಆತ್ಮಹತ್ಯೆಗೂ ಮುನ್ನ ತನ್ನ ಹೆತ್ತವರು, ಸಹೋದರ, ಗೆಳತಿ ಮತ್ತು ಆಪ್ತ ಸ್ನೇಹಿತನಿಗೆ ತಲಾ ಒಂದರಂತೆ ನಾಲ್ಕು ಆತ್ಮಹತ್ಯೆ ಪತ್ರಗಳನ್ನು ಬರೆದಿದ್ದಾರೆ. ಅದರಲ್ಲಿ ತನ್ನ ಹೆತ್ತವರ ನಿರೀಕ್ಷೆಗಳನ್ನು ಪೂರೈಸಲು ಸಾಧ್ಯವಾಗಲಿಲ್ಲ ಮತ್ತು ಜೀವನದ ಗುರಿ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com