ಮೇ 2ರಂದು ಗುಜರಾತ್ ಹೈಕೋರ್ಟ್ ನಲ್ಲಿ ರಾಹುಲ್ ಗಾಂಧಿ ಅರ್ಜಿಯ ಅಂತಿಮ ವಿಚಾರಣೆ!
'ಮೋದಿ ಉಪನಾಮ' ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಎರಡು ವರ್ಷಗಳ ಶಿಕ್ಷೆಗೆ ತಡೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Published: 29th April 2023 07:06 PM | Last Updated: 29th April 2023 07:34 PM | A+A A-

ರಾಹುಲ್ ಗಾಂಧಿ
ಅಹಮದಾಬಾದ್: 'ಮೋದಿ ಉಪನಾಮ' ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಎರಡು ವರ್ಷಗಳ ಶಿಕ್ಷೆಗೆ ತಡೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ ಅವರ ಪರಿಷ್ಕರಣೆ ಅರ್ಜಿಯ ವಿಚಾರಣೆ ಇಂದು ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಾರಂಭವಾಯಿತು. ಈ ವೇಳೆ ರಾಹುಲ್ ಪರ ವಕೀಲರು ಶಿಕ್ಷೆಗೆ ತಡೆಯಾಜ್ಞೆ ನೀಡಲು ಆರು ಮೂಲಭೂತ ಆಧಾರಗಳನ್ನು ಮಂಡಿಸಿದರು. ಇನ್ನು ಕೆಳ ನ್ಯಾಯಾಲಯದಿಂದ ಎರಡು ವರ್ಷಗಳ ಶಿಕ್ಷೆಯನ್ನು ಪಡೆದ ನಂತರ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಈ ಪ್ರಕರಣದ ಮುಂದಿನ ವಿಚಾರಣೆ ಮೇ 2ರಂದು ನಡೆಯಲಿದೆ.
ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರು ವಿಚಾರಣೆ ನಡೆಸಿದ್ದು ಈ ವೇಳೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ರಾಹುಲ್ ಪರ ತಮ್ಮ ವಾದವನ್ನು ಮಂಡಿಸಿದ್ದು ಶಿಕ್ಷೆಗೆ ತಡೆ ನೀಡುವಂತೆ ಒತ್ತಾಯಿಸಿದರು. ಸುಮಾರು ಒಂದೂವರೆ ಗಂಟೆಗಳ ಸುದೀರ್ಘ ವಾದದಲ್ಲಿ, ಸಿಂಘ್ವಿ ಸೂರತ್ ನ್ಯಾಯಾಲಯ ನೀಡಿದ ಶಿಕ್ಷೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು. ಸಿಂಘ್ವಿ ಹಲವು ಪ್ರಕರಣಗಳ ಉಲ್ಲೇಖಗಳನ್ನು ಮಂಡಿಸಿದರು. ಹೈಕೋರ್ಟ್‌ನಲ್ಲಿ ಮೇಲ್ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಈ ಪ್ರಕರಣದಲ್ಲಿ ಅರ್ಜಿದಾರ ಪೂರ್ಣೇಶ್ ಮೋದಿ ಪರವಾಗಿ ವಾದ ಮಂಡಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ: 'ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ' ಎಂದಿದ್ದ ರಾಹುಲ್ ಗಾಂಧಿ ದೋಷಿ; ಸೂರತ್ ನ್ಯಾಯಾಲಯ ತೀರ್ಪು, 2 ವರ್ಷ ಜೈಲು ಶಿಕ್ಷೆ
ಮಾಧ್ಯಮ ವರದಿಗಳ ಪ್ರಕಾರ, ಗುಜರಾತ್ ಹೈಕೋರ್ಟ್‌ನಲ್ಲಿ ಶನಿವಾರ ನಡೆದ ವಿಚಾರಣೆ ವೇಳೆ ಪೂರ್ಣೇಶ್ ಮೋದಿ ಅವರ ವಕೀಲರಾದ ಹರ್ಷಿತ್ ತೋವಾಲಾ ಮತ್ತು ನಿರುಪಮ್ ನಾನಾವತಿ ಅವರು ನ್ಯಾಯಾಲಯದ ಕೊಠಡಿಯಲ್ಲಿ ಹಾಜರಿದ್ದರು. ಹೈಕೋರ್ಟ್‌ನಲ್ಲಿ ವಿಚಾರಣೆ ವೇಳೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ರಾಹುಲ್ ಗಾಂಧಿಗೆ ಮೊದಲ ಬಾರಿಗೆ ಸಮನ್ಸ್ ನೀಡಿದಾಗ ಯಾವುದೇ ಸಾಕ್ಷ್ಯವನ್ನು ಪ್ರಾಥಮಿಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿಲ್ಲ ಎಂದು ಹೇಳಿದರು. ಪೂರ್ಣೇಶ್ ಮೋದಿ ಕೂಡ ಸಭೆಯಲ್ಲಿ ಇರಲಿಲ್ಲ, ಯಾರೋ ನನಗೆ ವಾಟ್ಸಾಪ್‌ನಲ್ಲಿ ಕ್ಲಿಪ್ ಕಳುಹಿಸಿದ್ದಾರೆ, ಆದರೆ ಕ್ಲಿಪ್ ಕಳುಹಿಸಿದ್ದು ಯಾರು ಎಂದು ಹೇಳಲಿಲ್ಲ. ಸೂರತ್ ನ್ಯಾಯಾಲಯದ ತೀರ್ಪು ವಿಕೃತವಾಗಿದೆ ಎಂದು ಸಿಂಘ್ವಿ ಹೇಳಿದ್ದಾರೆ.