ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ಎಷ್ಟೇ ಶಕ್ತಿವಂತರಾದರೂ ಆರೋಪಿಗೆ ಕಠಿಣ ಶಿಕ್ಷೆ: ಕುಸ್ತಿಪಟುಗಳ ಪ್ರತಿಭಟನೆಗೆ ಕೇಜ್ರಿವಾಲ್ ಬೆಂಬಲ

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಗಳು ಎಷ್ಟೇ ಶಕ್ತಿವಂತರಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. 

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಗಳು ಎಷ್ಟೇ ಶಕ್ತಿವಂತರಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. 

ಜಂತರ್ ಮಂಟಪದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಭೇಟಿ ಮಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, 'ನಮ್ಮ ಸಹೋದರಿಯರ ಹತ್ತಿರ ಅನುಚಿತವಾಗಿ ವರ್ತಿಸಿದ್ದಾರೆ. ಅಂತಹ ವ್ಯಕ್ತಿಯನ್ನು ತಕ್ಷಣವೇ ಶಿಕ್ಷಿಸಬೇಕು ಮತ್ತು ಗಲ್ಲಿಗೇರಿಸಬೇಕು. ಭಾರತವನ್ನು ಪ್ರೀತಿಸುವವನು ಕುಸ್ತಿಪಟುಗಳ ಜೊತೆ ನಿಲ್ಲುತ್ತಾರೆ. ಇಡೀ ದೇಶವು ಕುಸ್ತಿಪಟುಗಳ ಜೊತೆಗಿದೆ ಎಂದರು.

ವಾಸ್ತವವಾಗಿ, ಹಲವಾರು ದಿನಗಳಿಂದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಸೇರಿದಂತೆ ಅನೇಕ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬೆದರಿಕೆಗಳನ್ನು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎರಡು ಎಫ್ಐಆರ್
ಶುಕ್ರವಾರ (ಏಪ್ರಿಲ್ 28) ಸುಪ್ರೀಂ ಕೋರ್ಟ್‌ನಲ್ಲಿ ಕುಸ್ತಿಪಟುಗಳ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿದ್ಧ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದರ ನಂತರ, ಶುಕ್ರವಾರ ರಾತ್ರಿ, ಪೊಲೀಸರು ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ಇದರಲ್ಲಿ ಒಂದು ಎಫ್‌ಐಆರ್ ಅನ್ನು ಪೋಕ್ಸೊ ಕಾಯ್ದೆಯಡಿಯಲ್ಲಿ ದಾಖಲಿಸಲಾಗಿದೆ. ಇನ್ನೊಂದು ಎಫ್‌ಐಆರ್ ಅನ್ನು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ದಾಖಲಿಸಲಾಗಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದೇನು?
ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ನಂತರ ಬ್ರಿಜ್ ಭೂಷಣ್ ಅವರು, "ನ್ಯಾಯಾಂಗದ ನಿರ್ಧಾರದಿಂದ ನನಗೆ ಸಂತೋಷವಾಗಿದೆ. ದೆಹಲಿ ಪೊಲೀಸರ ತನಿಖೆಗೆ ನಾನು ಸಹಕರಿಸುತ್ತೇನೆ. ಈ ದೇಶದಲ್ಲಿ ದೊಡ್ಡ ಎಫ್‌ಐಆರ್ ಬರೆಯಲು ನ್ಯಾಯಾಂಗದಿಂದ ಆದೇಶ ಬಂದಿದೆ. ಎಫ್‌ಐಆರ್ ಬರೆಯಲು ಯಾವುದೇ ತೊಂದರೆ ಇಲ್ಲ ಎಂದು ಸರ್ಕಾರದ ಪರವಾಗಿ ಹೇಳಲಾಗಿದೆ. ನಾನು ನಿರ್ಧಾರವನ್ನು ಸ್ವಾಗತಿಸುತ್ತೇನೆ. ಸಮಿತಿ ರಚನೆಯಾದಾಗಲೂ ನಾನು ಯಾವುದೇ ಪ್ರಶ್ನೆ ಎತ್ತಲಿಲ್ಲ. ಇವರು ಕಾಯಬೇಕಿತ್ತು. ಅದನ್ನು ಬಿಟ್ಟು ಸುಪ್ರೀಂ ಕೋರ್ಟ್‌ಗೆ ಹೋದರು. ಅಲ್ಲಿಂದ ಒಂದು ನಿರ್ಧಾರ ಬಂದಿದೆ. ನನ್ನ ಕರ್ಮದಲ್ಲಿ ನನಗೆ ನಂಬಿಕೆ ಇದೆ ಎಂದರು.

ಕುಸ್ತಿಪಟುಗಳ ಬೇಡಿಕೆ ಏನು?
ಪ್ರತಿಭಟನಾನಿರತ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಬ್ರಿಜ್ ಭೂಷಣ್ ಅವರನ್ನು ಜೈಲಿಗೆ ಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ. ತನಿಖೆಯ ಮೇಲೆ ಪ್ರಭಾವ ಬೀರುವ ಕಾರಣ ಅವರನ್ನು ಎಲ್ಲಾ ಹುದ್ದೆಗಳಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸುತ್ತಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com