ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ

ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತ, ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಕಟ್ಟಡ ಕುಸಿತದಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದು, ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ಮುಂದುವರೆದಿದೆ.
Published on

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಕಟ್ಟಡ ಕುಸಿತದಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದು, ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ಮುಂದುವರೆದಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಘಟನೆ ದುರದೃಷ್ಟಕರವಾಗಿದ್ದು, 12 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.

ಎನ್ ಡಿಆರ್ ಎಫ್ ಮತ್ತು ಟಿಡಿಆರ್ ಎಫ್ ಮತ್ತಿತರ ಏಜೆನ್ಸಿಗಳಿಂದ ಅವಶೇಷಗಳಡಿ ಸಿಲುಕಿರುವ ಜನರ ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ. ಮೃತರ ಕುಟುಂಬ ಸದಸ್ಯರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಸೂಚಿಸಲಾಗಿದೆ ಎಂದು ಹೇಳಿದರು. 

ಕಟ್ಟಡ ಪುನರ್ ನಿರ್ಮಾಣ ಸಂಬಂಧ ಪ್ರಸ್ತಾವನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಏಕನಾಥ್ ಶಿಂಧೆ, ಈ ಬಗ್ಗೆ ಶೀಘ್ರದಲ್ಲೇ ನಿರ್ಧರಿಸಲಾಗುವುದು, ಮಳೆಗಾಲದಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಪಾಯಕಾರಿ ಕಟ್ಟಡಗಳ ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com