ತರಗತಿ ವೇಳೆ 6ನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ್ದ ಶಿಕ್ಷಕನ ಬಂಧನ!

ಪಂಜಾಬ್‌ನ ಫಗ್ವಾರಾದಲ್ಲಿ ಶಿಕ್ಷಕನೋರ್ವನ ನಾಚಿಕೆಗೇಡಿನ ಕೃತ್ಯ ಬೆಳಕಿಗೆ ಬಂದಿದೆ. 6ನೇ ತರಗತಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪಂಜಾಬ್‌ನ ಫಗ್ವಾರಾದಲ್ಲಿ ಶಿಕ್ಷಕನೋರ್ವನ ನಾಚಿಕೆಗೇಡಿನ ಕೃತ್ಯ ಬೆಳಕಿಗೆ ಬಂದಿದೆ. 6ನೇ ತರಗತಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. 

ಈ ಶಿಕ್ಷಕನು ತರಗತಿಯ ಎಲ್‌ಸಿಡಿ ಪರದೆಯಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸುತ್ತಿದ್ದನು. ನಂತರ ಅಶ್ಲೀಲ ಕೃತ್ಯಗಳನ್ನು ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. 

ಶಾಲಾ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ರಾಜೀವ್ ಶರ್ಮಾ ಎಂಬ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಸತ್ನಾಂಪುರ ಎಸ್‌ಎಚ್‌ಒ ಗುರಿಂದರ್ಜಿತ್ ಸಿಂಗ್ ತಿಳಿಸಿದ್ದಾರೆ. ಆರೋಪಿಯು ಗೋಬಿಂದಪುರ ಮೊಹಲ್ಲಾದ ಸರ್ಕಾರಿ ಮಾಧ್ಯಮಿಕ ಸ್ಮಾರ್ಟ್ ಸ್ಕೂಲ್‌ನಲ್ಲಿ ಶಿಕ್ಷಕನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com