8ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: ಕುಸ್ತಿಪಟುಗಳಿಗೆ ಧೈರ್ಯ ತುಂಬಿದ ಚಂದ್ರಶೇಖರ್ ಆಜಾದ್, ರಾಬರ್ಟ್ ವಾದ್ರಾ

ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್‌ನಲ್ಲಿ ಭಾರತದ ಅಗ್ರ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು ರಾಜಕಾರಣಿಗಳ ಬೆಂಬಲ ನೀಡುತ್ತಿದ್ದಾರೆ.
ಕುಸ್ತಿಪಟುಗಳ ಪ್ರತಿಭಟನೆ
ಕುಸ್ತಿಪಟುಗಳ ಪ್ರತಿಭಟನೆ

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್‌ನಲ್ಲಿ ಭಾರತದ ಅಗ್ರ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು ರಾಜಕಾರಣಿಗಳ ಬೆಂಬಲ ನೀಡುತ್ತಿದ್ದಾರೆ.

ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ. ಆಜಾದ್ ಮಾತನಾಡಿ, 'ಯಾರಾದರೂ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದರೆ, ಲಕ್ಷಾಂತರ ಜನರು ಬೆಂಬಲಕ್ಕೆ ಬರುತ್ತಾರೆ. ಅವರಿಗೆ ನ್ಯಾಯ ಬೇಕು. ಇದು ಪ್ರದೇಶ. ಜಾತಿ ಅಥವಾ ಧರ್ಮದ ಹೋರಾಟವಲ್ಲ, ಇದು ನ್ಯಾಯಕ್ಕಾಗಿ ಹೋರಾಟ' ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ವಾದ್ರಾ, ಪ್ರತಿಭಟನೆ ನಡೆಸುತ್ತಿರುವ ಎಲ್ಲಾ ಕ್ರೀಡಾಪಟುಗಳಿಗೆ ಬೆಂಬಲ ನೀಡಲು ಬಂದಿದ್ದೇನೆ. 'ನಾವೆಲ್ಲರೂ ಅವರೊಂದಿಗಿದ್ದೇವೆ. ನಾವು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತೇವೆ' ಎಂದು ವಾದ್ರಾ ಹೇಳಿದ್ದಾರೆ.

ಗಮನಾರ್ಹವೆಂದರೆ, ಏಪ್ರಿಲ್ 23ರಿಂದ ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಮತ್ತು ಡಬಲ್ ವರ್ಲ್ಡ್ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಆರಂಭದಲ್ಲಿ WFI ಮುಖ್ಯಸ್ಥ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿ ಆತನ ವಿರುದ್ಧ ಲೈಂಗಿಕ ದೌರ್ಜನ್ಯದ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದರು.

ಭಾರತದ ಅಗ್ರ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿ ಸುಮಾರು ಒಂದು ವಾರದ ನಂತರ ಏಪ್ರಿಲ್ 28ರಂದು ದೆಹಲಿ ಪೊಲೀಸರು ಈ ವಿಷಯದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ, ಎರಡು ಎಫ್‌ಐಆರ್‌ಗಳು ದಾಖಲಾದ ನಂತರವೂ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆಯಲು ನಿರಾಕರಿಸಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನ ಬಂಧಿಸುವಂತೆ ಸಂತ್ರಸ್ತ ಮಹಿಳಾ ಕುಸ್ತಿಪಟುಗಳು ಪಟ್ಟು ಹಿಡಿದಿದ್ದು ನ್ಯಾಯ ಸಿಗುವವರೆಗೂ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.

ಇತ್ತೀಚಿನ ಬೆಳವಣಿಗೆಯ ಪ್ರಕಾರ, ದೆಹಲಿ ಪೊಲೀಸ್ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, ಅಪ್ರಾಪ್ತ ಬಾಲಕಿ ಸೇರಿದಂತೆ ಎಲ್ಲಾ ಏಳು ಮಹಿಳಾ ದೂರುದಾರರಿಗೆ ಭದ್ರತೆಯನ್ನು ಒದಗಿಸಲಿದೆ. ಶೀಘ್ರದಲ್ಲೇ ಅವರ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಿದ್ದೇವೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com