ಹರಿಯಾಣ: ವಿಎಚ್‌ಪಿ ಮೆರವಣಿಗೆ ಮೇಲೆ ಕಲ್ಲು ತೂರಾಟ; ಇಬ್ಬರು ಹೋಮ್ ಗಾರ್ಡ್‌ ಸಾವು

ಹರ್ಯಾಣದ ನುಹ್ ಜಿಲ್ಲೆಯಲ್ಲಿ ಸೋಮವಾರ ನಡೆದ ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಹೋಮ್ ಗಾರ್ಡ್‌ಗಳು ಸಾವನ್ನಪ್ಪಿದ್ದಾರೆ ಮತ್ತು ಹಲವು ಪೊಲೀಸರು...
ನುಹ್ ಜಿಲ್ಲೆಯಲ್ಲಿ ಹಿಂಸಾಚಾರ
ನುಹ್ ಜಿಲ್ಲೆಯಲ್ಲಿ ಹಿಂಸಾಚಾರ

ಗುರುಗ್ರಾಮ್/ಚಂಡೀಗಢ: ಹರಿಯಾಣದ ನುಹ್ ಜಿಲ್ಲೆಯಲ್ಲಿ ಸೋಮವಾರ ನಡೆದ ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಹೋಮ್ ಗಾರ್ಡ್‌ಗಳು ಸಾವನ್ನಪ್ಪಿದ್ದಾರೆ ಮತ್ತು ಹಲವು ಪೊಲೀಸರು ಸೇರಿದಂತೆ ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ.

ದುಷ್ಕರ್ಮಿಗಳು ವಿಎಚ್‌ಪಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ, ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುಗ್ರಾಮ್ ಜಿಲ್ಲೆಯ ಸೋಹ್ನಾದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದರಿಂದ 15 ಹೆಚ್ಚುವರಿ ಕೇಂದ್ರೀಯ ಪಡೆಗಳನ್ನು ಹರಿಯಾಣಕ್ಕೆ ಕಳುಹಿಸುತ್ತಿರುವುದಾಗಿ ಕೇಂದ್ರ ಗೃಹ ಸಚಿವಾಲಯವು ಹೇಳಿದೆ.

ಮುಸ್ಲಿಂ ಪ್ರಾಬಲ್ಯದ ನುಹ್‌ನಲ್ಲಿ ಹಿಂಸಾಚಾರದ ಸುದ್ದಿ ಹರಡುತ್ತಿದ್ದಂತೆ, ಸೊಹ್ನಾದಲ್ಲಿ ದುಷ್ಕರ್ಮಿಗಳ ಗುಂಪು, ನಾಲ್ಕು ವಾಹನಗಳು ಮತ್ತು ಅಂಗಡಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿವೆ.

ನುಹ್‌ನಲ್ಲಿರುವ ಶಿವ ದೇವಾಲಯದಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳನ್ನು ಪೊಲೀಸರು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಅವರು ಹೇಳಿದ್ದಾರೆ.

ನುಹ್ ಮತ್ತು ಗುರುಗ್ರಾಮ್ ಜಿಲ್ಲೆಗಳಲ್ಲಿ ಜನ ಗುಂಪು ಸೇರುವುದನ್ನು ನಿಷೇಧಿಸುವ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನುಹ್ ಮತ್ತು ಫರಿದಾಬಾದ್‌ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಬುಧವಾರದವರೆಗೆ ಸ್ಥಗಿತಗೊಳಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಫರಿದಾಬಾದ್ ಮತ್ತು ಪಲ್ವಾಲ್ ಜಿಲ್ಲೆಗಳಲ್ಲಿ ಮಂಗಳವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com