ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಉಗ್ರರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯದ ಎತ್ತರದ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ ಎಂದು ಅವರು ಹೇಳಿದ್ದಾರೆ.
"ಎನ್ಕೌಂಟರ್ನಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಈ ಪ್ರದೇಶದಲ್ಲಿ ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement