ಮಧ್ಯ ಪ್ರದೇಶ: ಬುಡಕಟ್ಟು ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕನ ಪುತ್ರ
ಮಧ್ಯ ಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಪುತ್ರ, ತನ್ನೊಂದಿಗೆ ವಾಗ್ವಾದ ನಡೆಸಿದ 34 ವರ್ಷದ ಬುಡಕಟ್ಟು ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Published: 05th August 2023 12:14 AM | Last Updated: 05th August 2023 02:28 PM | A+A A-

ಸಾಂದರ್ಭಿಕ ಚಿತ್ರ
ಸಿಂಗ್ರೌಲಿ: ಮಧ್ಯ ಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಪುತ್ರ, ತನ್ನೊಂದಿಗೆ ವಾಗ್ವಾದ ನಡೆಸಿದ 34 ವರ್ಷದ ಬುಡಕಟ್ಟು ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಲ್ಲಿ ಬುಡಕಟ್ಟು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಘಟನೆಯ ನಂತರ ಬಿಜೆಪಿ ಶಾಸಕನ ಪುತ್ರ, 40 ವರ್ಷದ ವಿವೇಕಾನಂದ ವೈಶ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಮೊರ್ಬಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಶೋಕ್ ಸಿಂಗ್ ಪರಿಹಾರ್ ಅವರು ಹೇಳಿದ್ದಾರೆ.
ಆರೋಪಿ ವೈಶ್ಯ ಅವರು ಸಿಂಗ್ರೌಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ ಲಲ್ಲು ವೈಶ್ಯ ಅವರ ಪುತ್ರ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ(IPC) ಸೆಕ್ಷನ್ 307 (ಕೊಲೆಗೆ ಯತ್ನ) ಮತ್ತು ಸೆಕ್ಷನ್ 25 (ಯಾವುದೇ ನಿಷೇಧಿತ ಶಸ್ತ್ರಾಸ್ತ್ರಗಳನ್ನು ಹೊಂದುವುದು ಅಥವಾ ಸಾಗಿಸುವುದು) ಮತ್ತು ಸೆಕ್ಷನ್ 27 (ಶಸ್ತ್ರಾಸ್ತ್ರ, ಮದ್ದುಗುಂಡುಗಳ ಬಳಕೆ) ಅಡಿ ವಿವೇಕಾನಂದ ವೈಶ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪರಿಹಾರ್ ಅವರು ಹೇಳಿದ್ದಾರೆ.
ಇದನ್ನು ಓದಿ: ಚಲಿಸುತ್ತಿದ್ದ ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ: ಎಎಸ್ ಐ ಸೇರಿ ಮೂವರು ಪ್ರಯಾಣಿಕರು ದುರ್ಮರಣ
ಪ್ರಾಥಮಿಕ ತನಿಖೆಯ ನಂತರ, ಶುಕ್ರವಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಬಂಧಿತ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗಿದೆ.
ಗುರುವಾರದ ಘಟನೆಯ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಆರೋಪಿಯು ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿಮೀ ದೂರದಲ್ಲಿರುವ ಬುಧಿ ಮಾಯಿ ಮಾತಾ ದೇವಸ್ಥಾನದ ಬಳಿ ಕಿರಿದಾದ ರಸ್ತೆಯಲ್ಲಿ ವ್ಯಕ್ತಿಗಳ ಗುಂಪಿನೊಂದಿಗೆ ಜಗಳವಾಡಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ಸಂತ್ರಸ್ತ ಸೂರ್ಯ ಕುಮಾರ್ ಖೈರ್ವಾರ್ ಆ ಗುಂಪಿನೊಂದಿಗೆ ಸೇರಿಕೊಂಡರು ವೈಶ್ಯ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.
ಇದರಿಂದ ಕೋಪಗೊಂಡ ರಾಜಕಾರಣಿಯ ಪುತ್ರ, ಖೈರ್ವಾರ್ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಖೈರ್ವಾರ್ ಅವರನ್ನು ಜಿಲ್ಲಾ ಆಸ್ಪತ್ರೆಯ ಟ್ರಾಮಾ ವಾರ್ಡ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದಾರೆ" ಎಂದು ಇನ್ಸ್‌ಪೆಕ್ಟರ್ ಪರಿಹಾರ್ ತಿಳಿಸಿದ್ದಾರೆ.