ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಎನ್ಕೌಂಟರ್; ಓರ್ವ ಉಗ್ರನ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ರಜೌರಿ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.

ರಜೌರಿ ಜಿಲ್ಲೆಯ ಬರಿಯಾಮಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.

ಕಾರ್ಯಾಚರಣ ಆರಂಭವಾಗುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳವನ್ನು ಸುತ್ತುವರೆದ ಸೇನಾಪಡೆ ಎನ್ಕೌಂಡರ್ ನಡೆಸಿ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com